ಭಾರತ್ ಬ್ರ್ಯಾಂಡ್ ಅಕ್ಕಿ: ಬೆಂಗಳೂರಿನಲ್ಲಿ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಚಾಲನೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಕೇಂದ್ರ ಸರ್ಕಾರದ ಭಾರತ್ ಬ್ರ್ಯಾಂಡ್ ಅಕ್ಕಿ (Bharat Brand Rice)ಯೋಜನೆಗೆ ಇಂದು ಚಾಲನೆ‌ ಸಿಕ್ಕಿದೆ. ಬೆಂಗಳೂರಿನಲ್ಲಿ ಮಾಜಿ ಮುಖ್ಯಮಂತ್ರಿ ಬಿಎಸ್​ ಯಡಿಯೂರಪ್ಪ (BS Yediyurappa) ಅವರು ಈ ಭಾರತ್ ಬ್ರಾಂಡ್ ಅಕ್ಕಿ ಯೋಜನೆಗೆ ಚಾಲನೆ ನೀಡಿದರು.

ಕೇಂದ್ರ ಸರ್ಕಾರದಿಂದ ಒಂದು ಕೆಜಿಗೆ ರೂ.29ರಂತೆ ಅಕ್ಕಿಯನ್ನು ವಿತರಣೆ ಮಾಡಲಾಗುತ್ತಿದೆ.
ಬೆಂಗಳೂರಿನ ಡಾಲರ್ಸ್ ಕಾಲೋನಿಯಲ್ಲಿ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರು ಭಾರತ್ ಬ್ರಾಂಡ್ ಅಕ್ಕಿ ಯೋಜನೆಗೆ ಚಾಲನೆ ನೀಡಿದ್ದಾರೆ.

ಕಾರ್ಯಕ್ರಮದಲ್ಲಿ ಮಾತನಾಡಿದ ಮಾಜಿ ಸಿಎಂ ಬಿ.ಎಸ್.‌ ಯಡಿಯೂರಪ್ಪ, ಪ್ರಧಾನಿ ಮೋದಿ ಅವರ ನೇತೃತ್ವದಲ್ಲಿ ಕಾರ್ಯಕ್ರಮ ರೂಪಿಸಲಾಗಿದೆ. 29 ರೂಪಾಯಿಗೆ ಕೆಜಿ ಅಕ್ಕಿ, ಗೋದಿ 50 ರೂ., ಹೆಸರು ಕಾಳು 90 ರೂ., ತೊಗರಿ ಬೇಳೆ 60 ರೂ. ಕೆಜಿಗೆ ಮಾರಾಟ ಮಾಡಲಾಗುತ್ತಿದೆ. ಇಂತಹ ಒಳ್ಳೆಯ ಕಾರ್ಯಕ್ರಮಕ್ಕೆ ಚಾಲನೆ ನೀಡಲು ಹೆಮ್ಮೆ ಇದೆ. ದೇಶದ ಇತಿಹಾಸದಲ್ಲಿ ಬಡವರು ಮತ್ತು ಮಧ್ಯಮ ವರ್ಗಕ್ಕೆ ಯೋಜನೆ ತಲುಪಲಿದೆ. ಕಾಂಗ್ರೆಸ್ ಚುನಾವಣಾ ಪೂರ್ವದಲ್ಲಿ ಹತ್ತು ಕೆಜಿ ಅಕ್ಕಿ ಉಚಿತ ನೀಡುವುದಾಗಿ ಹೇಳಿ ಕೇಂದ್ರದ ಐದು ಕೆಜಿ ಅಕ್ಕಿ ಹೊರತುಪಡಿಸಿ ಒಂದು ಕೆಜಿಯೂ ಅಕ್ಕಿ ಕೊಟ್ಟಿಲ್ಲ. ಜನರಿಗೆ ಅನುಕೂಲ ಆಗುವಂತೆ ಕಡಿಮೆ ದರದಲ್ಲಿ ಅಕ್ಕಿ ದೊರೆಯುತ್ತಿದೆ ಎಂದು ಹೇಳಿದರು.

ರಾಜ್ಯದ ಬೇರೆ ಬೇರೆ ಜಿಲ್ಲೆಗಳಲ್ಲೂ ಲಭ್ಯ
ಕೇಂದ್ರ ಸರ್ಕಾರ ಅಕ್ಕಿ ದರ ಏರಿಕೆ ನಿಯಂತ್ರಿಸಲು ಈ ಯೋಜನೆಯನ್ನು ಘೋಷಿಸಿದೆ. ನಾಫೆಡ್​​-ಭಾರತ ರಾಷ್ಟ್ರೀಯ ಕೃಷಿ ಸಹಕಾರ ಮಾರುಕಟ್ಟೆ ಒಕ್ಕೂಟದಿಂದ ಇಂದು ನಾಫೆಡ್​​ನ 7 ಸಂಚಾರಿ ವಾಹನಗಳಲ್ಲಿ ಭಾರತ್​ ಅಕ್ಕಿ ಮಾರಾಟ ಮಾಡಲಾಗುತ್ತದೆ. ಭಾರತ್ ಅಕ್ಕಿ ಯೋಜನೆಯಡಿ ಕೆಜಿ ಭಾರತ್ ಅಕ್ಕಿಗೆ 29 ರೂ. ನಿಗದಿ ಪಡಿಸಲಾಗಿದ್ದು, 5 ಕೆಜಿ, 10 ಕೆಜಿ ಬ್ಯಾಗ್​ಗಳಲ್ಲಿ ಭಾರತ್ ಬ್ರ್ಯಾಂಡ್ ಅಕ್ಕಿ ಲಭ್ಯವಿದೆ. ಇಂದು ಬೆಂಗಳೂರಿನಲ್ಲಿ ಚಾಲನೆ ನೀಡಲಾಗಿದ್ದು, ನಾಳೆಯಿಂದೆ ರಾಜ್ಯದ ಬೇರೆ ಬೇರೆ ಜಿಲ್ಲೆಗಳಲ್ಲೂ ಲಭ್ಯವಾಗಲಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!