ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಹುಲ್ ಗಾಂಧಿ ನೇತೃತ್ವದಲ್ಲಿ ನಡೆದ ಭಾರತ್ ಜೋಡೋ ಯಾತ್ರೆಗೆ ಇಂದು ಒಂದು ವರ್ಷ ತುಂಬಿದೆ. ಈ ಹಿನ್ನೆಲೆಯಲ್ಲಿ ರಾಮನಗರದಲ್ಲಿ ಕಾಂಗ್ರೆಸ್ ಬೃಹತ್ ಕಾರ್ಯಕ್ರಮವೊಂದನ್ನು ಆಯೋಜಿಸಿದೆ.
ಸಿಎಂ ಸಿದ್ದರಾಮಯ್ಯ ಸೇರಿ ಹಲವರು ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ. ಪಾದಯಾತ್ರೆಯ ವಾರ್ಷಿಕೋತ್ಸವ ಅಂಗವಾಗಿ ದೇಶಾದ್ಯಂತ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲು ನಿರ್ಧರಿಸಿದ್ದೇವೆ. ಅದರ ಭಾಗವಾಗಿ ರಾಮನಗರದಲ್ಲಿ ಕಾಂಗ್ರೆಸ್ ಪಾದಯಾತ್ರೆ ಹಮ್ಮಿಕೊಂಡಿದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಕಾರ್ಯಕ್ರಮ ಆಯೋಜಿಸಲು ಸಕಲ ಸಿದ್ಧತೆ ನಡೆಸಲಾಗಿತ್ತು. ಆದರೆ ಪಾದಯಾತ್ರೆಯಿಂದಾಗಿ ಸಾಕಷ್ಟು ಟ್ರಾಫಿಕ್ ಸಮಸ್ಯೆಯಾಗುತ್ತದೆ. ಹಾಗಾಗಿ ಕೊನೆಯಲ್ಲಿ ರಾಮನಗರದಲ್ಲಿ ಕಾರ್ಯಕ್ರಮ ಮಾಡಲು ಮುಂದಾಗಿದ್ದೇವೆ ಎಂದಿದ್ದಾರೆ.
ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆಶಿ ಸಾರ್ವಜನಿಕರ ಜೊತೆ ಸೇರಿ ಒಂದು ಗಂಟೆ ಪಾದಯಾತ್ರೆ ನಡೆಸಲಿದ್ದಾರೆ. ತದನಂತರ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುವುದು ಎಂದಿದ್ದಾರೆ.