ಭಾರತ್ ಜೋಡೋ ಆಯಿತು ಈಗ ಮತ್ತೊಂದು ಯಾತ್ರೆಗೆ ಸಜ್ಜಾದ ಕಾಂಗ್ರೆಸ್!

ಹೊಸದಿಗಂತ ಡಿಜಿಟಲ್ ಡೆಸ್ಕ್:

ದೇಶದಲ್ಲಿ ಮತ್ತೆ ಅಧಿಕಾರಕ್ಕೇರಲು ಕಾಂಗ್ರೆಸ್ ಭಾರತ್ ಜೋಡೋ (Bharat Jodo Yatra) ಯಾತ್ರೆ ನಡೆಸುತ್ತಿದ್ದು, ಕೊನೆಯ ಹಂತ ತಲುಪಿದೆ. ಇದರ ಬೆನ್ನಲ್ಲೇ ಹೊಸ ಅಭಿಯಾನ ಆರಂಭಿಸಿದೆ.

ಇಂದು ದೆಹಲಿಯಲ್ಲಿ ಸುದ್ದಿಗೋಷ್ಠಿ ನಡೆಸಿದ ಎಐಸಿಸಿ (AICC) ಸಂಘಟನಾ ಪ್ರಧಾನ ಕಾರ್ಯದರ್ಶಿ ಕೆ.ಸಿ ವೇಣುಗೋಪಾಲ್ (K C Venugopal) ‘ಹಾತ್ ಸೇ ಹಾತ್ ಜೋಡೋ’ (Hath Se Hath Jodo Yatra) ಅಭಿಯಾನದ ಲೋಗೋ ಬಿಡುಗಡೆ ಮಾಡಿದರು.

ಭಾರತ್ ಜೋಡೋ ಯಾತ್ರೆಗೆ ಅಭೂತಪೂರ್ವ ಬೆಂಬಲ ವ್ಯಕ್ತವಾಗಿದೆ. ಯಾತ್ರೆಯ ಉದ್ದೇಶವನ್ನು ಜನರಿಗೆ ತಿಳಿಸಬೇಕಿದೆ. ಈ ಹಿನ್ನೆಲೆ ಜನರ ಮನೆಗಳನ್ನು ತಲುಪಲು ‘ಹಾತ್ ಸೇ ಹಾತ್ ಜೋಡೋ’ ಅಭಿಯಾನ ಆರಂಭಿಸಿದ್ದು ಜನವರಿ 26 ರಿಂದ ಇದು ಆರಂಭವಾಗಲಿದೆ ಎಂದರು.

ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ (Priyanka Gandhi Vadra) ‘ಹಾತ್ ಸೇ ಹಾತ್ ಜೋಡೋ’ ಅಭಿಯಾನಕ್ಕೆ ಚಾಲನೆ ನೀಡಲಿದ್ದು, ಮೊದಲ ಹಂತದಲ್ಲಿ ಗ್ರಾಮ ಮತ್ತು ಬ್ಲಾಕ್ ಮಟ್ಟದಲ್ಲಿ, ಎರಡನೇ ಹಂತದಲ್ಲಿ ಜಿಲ್ಲಾ ಮಟ್ಟದಲ್ಲಿ ಮತ್ತು ಮೂರನೇ ಹಂತದಲ್ಲಿ ರಾಜ್ಯ ಮಟ್ಟದಲ್ಲಿ ಕಾರ್ಯಕ್ರಮಗಳನ್ನು ಆಯೋಜಿಸಲಾಗುವುದು ಎಂದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!