4ನೇ ದಿನಕ್ಕೆ ಕಾಲಿಟ್ಟ ಕಾಂಗ್ರೆಸ್ ಯಾತ್ರೆ: ರಾಹುಲ್‌ ಜೊತೆ ಸೆಲ್ಫಿಗಾಗಿ ಮುಗಿಬಿದ್ದ ಯುವತಿಯರು

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಭಾರತ್ ಜೋಡೋ ಪಾದಯಾತ್ರೆ ನಾಲ್ಕನೇ ದಿನವೂ ಮುಂದುವರೆದಿದೆ. ಶನಿವಾರ ಬೆಳಗ್ಗೆ 7 ಗಂಟೆಗೆ ತಮಿಳುನಾಡಿನ ಮುಳಗುಮೋಡಿನಿಂದ ಭಾರತ್ ಜೋಡೋ ಪಾದಯಾತ್ರೆಯನ್ನು ರಾಹುಲ್ ಗಾಂಧಿ ಪುನರಾರಂಭಿಸಿದರು. ಇಂದು ಕನ್ಯಾಕುಮಾರಿಯ ಮೂರ್ತಾಂಡಂನಲ್ಲಿರುವ ನೇಸಮೋನಿ ಸ್ಮಾರಕ ಕ್ರಿಶ್ಚಿಯನ್ ಕಾಲೇಜಿನಲ್ಲಿ ಆಯೋಜಿಸಿರುವ ಕಾರ್ಯಕ್ರಮದಲ್ಲಿ ರಾಹುಲ್ ಗಾಂಧಿ ಭಾಗವಹಿಸಲಿದ್ದಾರೆ.

ರಾಹುಲ್ ಗಾಂಧಿ ಪಾದಯಾತ್ರೆಯಲ್ಲಿ ಮುಂದೆ ಸಾಗುವ ವೇಳೆ ರಸ್ತೆ ಬದಿಯಲ್ಲಿ ರಾಹುಲ್ ಬರುವಿಕೆಗಾಗಿ ಮಕ್ಕಳು, ಯುವತಿಯರು ಕಾದು ಕುಳಿತಿದ್ದು, ರಾಹುಲ್ ಬರುತ್ತಿದ್ದಂತೆ ಓಡೋಡಿ ಬಂದ ಅಭಿಮಾನಿಗಳು ಸೆಲ್ಫಿಗಾಗಿ ಮುಗಿಬಿದ್ದರು. ರಾಹುಲ್ ಗಾಂಧಿ ತಾಳ್ಮೆಯಿಂದ ನಗುಮೊಗದಿಂದ ಅವರೊಂದಿಗೆ ಸೆಲ್ಫಿಗೆ ಪೋಸ್‌ ನೀಡಿದರು. ಇದಕ್ಕೆ ಸಂಬಂಧಿಸಿದ ವಿಡಿಯೋ ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!