ಹೊಸದಿಗಂತ ಡಿಜಿಟಲ್ ಡೆಸ್ಕ್:
ಕಾಂಗ್ರೆಸ್ ಪಕ್ಷದ ಭಾರತ್ ಜೋಡೋ ಯಾತ್ರೆಯ ಎರಡನೇ ಹಂತಕ್ಕೆ ತಯಾರಿ ನಡೆಸುತ್ತಿದ್ದು, ಡಿಸೆಂಬರ್ ನಿಂದ ಆರಂಭಿಸಲು ಪ್ಲಾನ್ ಮಾಡಿಕೊಂಡಿದೆ.
ಡಿಸೆಂಬರ್ 2023 ಮತ್ತು ಫೆಬ್ರವರಿ 2024 ರ ನಡುವೆ ಯಾವುದೇ ಸಮಯದಲ್ಲಿ ಪ್ರಾರಂಭವಾಗುವ ಸಾಧ್ಯತೆಯಿದೆ ಎಂದು ಮೂಲಗಳು ಮಂಗಳವಾರ ತಿಳಿಸಿವೆ.
ರಾಹುಲ್ ಗಾಂಧಿ ನೇತೃತ್ವದ ಭಾರತ್ ಜೋಡೋ ಯಾತ್ರಾ 2.0 ಹೈಬ್ರಿಡ್ ಮೋಡ್ ನಲ್ಲಿರಲಿದ್ದು, ಕಾಲ್ನಡಿಗೆಯಲ್ಲಿ ಮತ್ತು ವಾಹನಗಳನ್ನು ಬಳಸಿ ಮೆರವಣಿಗೆ ನಡೆಸಲಿದ್ದಾರೆ.
ಭಾರತ್ ಜೋಡೋ ಯಾತ್ರೆಯ ಮೊದಲ ಹಂತವು ಸೆಪ್ಟೆಂಬರ್ 7, 2022 ರಂದು ತಮಿಳುನಾಡಿನ ಕನ್ಯಾಕುಮಾರಿಯಿಂದ ಪ್ರಾರಂಭವಾಗಿತ್ತು. ಸುಮಾರು 4,080 ಕಿ.ಮೀ ದೂರವನ್ನು ಕ್ರಮಿಸಿದ ಯಾತ್ರೆ 2023 ರ ಜನವರಿಯಲ್ಲಿ ಜಮ್ಮು ಮತ್ತು ಕಾಶ್ಮೀರದ ಶ್ರೀನಗರದಲ್ಲಿಕೊನೆಗೊಂಡಿತು.
ಈ ಯಾತ್ರೆಯು 126 ದಿನಗಳಲ್ಲಿ 12 ರಾಜ್ಯಗಳ 75 ಜಿಲ್ಲೆಗಳ ಮೂಲಕ ಹಾದುಹೋಗಿತ್ತು.