ಭಾರತ್‌ ಜೋಡೋ ಯಾತ್ರೆಯ ಸಮಾರೋಪ ಸಮಾರಂಭ: 21 ಪಕ್ಷಗಳಿಗೆ ಆಹ್ವಾನ!

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ರಾಹುಲ್‌ ಗಾಂಧಿ ನೇತೃತ್ವದ ಭಾರತ್‌ ಜೋಡೋ ಯಾತ್ರೆಗೆ ಅಂತಿಮ ಘಟ್ಟ ತಲುಪಿದ್ದು, ಶ್ರೀನಗರದಲ್ಲಿ ನಡೆಯಲಿರುವ ಸಮಾರೋಪ ಸಮಾರಂಭಕ್ಕೆ ಕಾಂಗ್ರೆಸ್‌ 21 ಪಕ್ಷಗಳಿಗೆ ಆಹ್ವಾನ ನೀಡಿದೆ.

‘ಜನವರಿ 30ರಂದು ಸಾಮರಸ್ಯ, ಒಗ್ಗಟ್ಟು ಸಾರುವ ದಿಸೆಯಲ್ಲಿ, ಸಾವಿರಾರು ಕಿ.ಮೀವರೆಗೆ ಸಾಗಿದ ಭಾರತ್‌ ಜೋಡೋ ಯಾತ್ರೆಯ ಸಮಾರೋಪ ಸಮಾರಂಭ ಆಯೋಜಿಸಲಾಗಿದೆ. ಎಲ್ಲ ಸಮಾನ ಮನಸ್ಕ ಪಕ್ಷಗಳು ಸಮಾರಂಭಕ್ಕೆ ಆಗಮಿಸಬೇಕು’ ಎಂದು ಕಾಂಗ್ರೆಸ್‌ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು 21 ಪಕ್ಷಗಳಿಗೆ ಆಮಂತ್ರಣ ನೀಡಿದ್ದಾರೆ.

ಆ ಮೂಲಕ ಯಾತ್ರೆಯ ಸಮಾರೋಪ ಸಮಾರಂಭದಲ್ಲಿ ಪ್ರತಿಪಕ್ಷಗಳ ಬಲ ಪ್ರದರ್ಶಿಸಲು ಕಾಂಗ್ರೆಸ್‌ ತೀರ್ಮಾನಿಸಿದೆ.

ಮಮತಾ ಬ್ಯಾನರ್ಜಿ ನೇತೃತ್ವದ ಟಿಎಂಸಿ, ನಿತೀಶ್‌ ಕುಮಾರ್‌ ಅವರ ಜೆಡಿಯು, ಟಿಡಿಪಿ, ಶಿವಸೇನೆ (ಉದ್ಧವ್‌ ಠಾಕ್ರೆ ಬಣ), ನ್ಯಾಷನಲ್‌ ಕಾನ್ಫರೆನ್ಸ್‌, ಎಸ್‌ಪಿ, ಬಿಎಸ್‌ಪಿ, ಡಿಎಂಕೆ, ಸಿಪಿಐ, ಸಿಪಿಎಂ, ಜೆಎಂಎಂ, ಆರ್‌ಜೆಡಿ, ಆರ್‌ಎಲ್‌ಎಸ್‌ಪಿ, ಎಚ್‌ಎಎಂ, ಪಿಡಿಪಿ, ಎನ್‌ಸಿಪಿ, ಎಂಡಿಎಂಕೆ, ವಿಸಿಕೆ, ಐಯುಎಂಎಲ್‌, ಕೆಎಸ್‌ಎಂ ಹಾಗೂ ಆರ್‌ಸಿಪಿಗಳಿಗೆ ಕಾಂಗ್ರೆಸ್‌ ಆಹ್ವಾನ ನೀಡಿದೆ.

ಆದ್ರೆ ಕರ್ನಾಟಕದಲ್ಲಿ ಕಾಂಗ್ರೆಸ್‌ಗೆ ಪ್ರಬಲ ಎದುರಾಳಿಯಾಗಿರುವ ಜೆಡಿಎಸ್‌, ಆಪ್‌, ಬಿಜೆಡಿ, ಬಿಆರ್‌ಎಸ್‌, ವೈಎಸ್‌ಆರ್‌ಸಿಪಿ ಹಾಗೂ ಶಿರೋಮಣಿ ಅಕಾಲಿದಳ (SAD) ಪಕ್ಷಗಳಿಗೆ ಆಹ್ವಾನ ನೀಡಿಲ್ಲ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!