ಹಿಮಾಚಲ ಗೆಲುವಿಗೆ ಭಾರತ್ ಜೋಡೋ ಯಾತ್ರೆ ಸಹಾಯ: ಮಲ್ಲಿಕಾರ್ಜುನ್ ಖರ್ಗೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌

ಹಿಮಾಚಲ ಪ್ರದೇಶದಲ್ಲಿ ಗೆಲುವಿಗೆ ರಾಹುಲ್ ಗಾಂಧಿಯವರ ಭಾರತ್ ಜೋಡೋ ಯಾತ್ರೆಯು ಸಹಾಯ ಮಾಡಿದೆ ಎಂದು ಎಐಸಿಸಿ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ ತಿಳಿಸಿದರು.
ಭಾರತ್ ಜೋಡೋ ಯಾತ್ರೆ ಬಗ್ಗೆ ಹಿಮಾಚಲ ಜನ ಮೆಚ್ಚುಗೆ ವ್ಯಕ್ತಪಡಿಸಿದರು. ನಾನು ಹೋದಾಗ ಕೂಡ ಉತ್ತಮ ಸ್ಪಂದನೆ ಸಿಕ್ಕಿತ್ತು. ಹೀಗಾಗಿ ಉತ್ತಮ ಬಹುಮತದಿಂದ ಪಕ್ಷಕ್ಕೆ ಗೆಲುವು ಬಂದಿದೆ ಎಂದು ಅಭಿಪ್ರಾಯಪಟ್ಟರು.
ಇಲ್ಲಿನ ಗೆಲುವಿನ ಬಹುಪಾಲು ಪ್ರಿಯಾಂಕಾ ವಾದ್ರಾ ಅವರದ್ದು, ಸಾಕಷ್ಟು ರ‍್ಯಾಲಿ, ಸಮಾವೇಶ ಮಾಡಿದ್ದಾರೆ. ಅವರಿಗೆ ವಿಶೇಷ ಅಭಿನಂದನೆ ಸಲ್ಲಿಸುತ್ತೇನೆ ಎಂದರು.
ಇದೇ ವೇಳೆ ಗುಜರಾತ್ ಚುನಾವಣೆಯಲ್ಲಿ ಕಾಂಗ್ರೆಸ್ ಸೋಲಿನ ಬಗ್ಗೆ ಮಾತನಾಡಿದ ಅವರು, ಗುಜರಾತ್ ಸೋಲು ಕಾರಣ ಸಾಕಷ್ಟು ಇವೆ. ಪಕ್ಷ ಇಷ್ಟು ಕೆಳ ಮಟ್ಟಕ್ಕೆ ಬರಲು ಕ್ಯಾಂಪೇನ್ ಮಾಡಿಲ್ಲ. ಕಳೆದ ಬಾರಿ ಅತೀ ಹೆಚ್ಚು ಕ್ಷೇತ್ರ ಭೇಟಿ ಕೊಟ್ಟಿದ್ದೆವು. ಆದರೆ ಹಲವು ಕಡೆ ಕಡಿಮೆ ಅಂತರದಲ್ಲಿ ಸೋತಿದ್ದೇವು. ಈ ಸಲ ಕೆಲವು ಪಕ್ಷ ಹೊಸದಾಗಿ ಬಂದು ನಮ್ಮ ಮತ ಕೆಡಿಸಿವೆ. ಅಸ್ತಿತ್ವದಲ್ಲಿ ಇಲ್ಲದ ಪಕ್ಷ ಬಂದು ಮತಗಳ ವಿಭಜನೆ ಮಾಡಿದೆ ಎಂದು ಬೇಸರ ವ್ಯಕ್ತಪಡಿಸಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!