ಪಂಜಾಬ್ ನಲ್ಲಿ ಭಾರತ್ ಜೋಡೋ ಯಾತ್ರೆ: ಗೋಲ್ಡನ್ ಟೆಂಪಲ್ ಗೆ ರಾಹುಲ್ ಗಾಂಧಿ ಭೇಟಿ!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಪಂಜಾಬ್ ಗೆ ಭಾರತ್ ಜೋಡೋ ಯಾತ್ರೆ ಪ್ರವೇಶಿಸಿದ್ದು, ಈ ಹಿನ್ನೆಲೆ ರಾಹುಲ್ ಗಾಂಧಿ ಅವರು ಮಂಗಳವಾರ ಅಮೃತಸರದ ಶ್ರೀ ಹರ್ಮಂದಿರ್ ಸಾಹಿಬ್(ಗೋಲ್ಡನ್ ಟೆಂಪಲ್)ಗೆ ಭೇಟಿ ನೀಡಿದರು.

ಇಂದು ಬೆಳಗ್ಗೆ ಹರಿಯಾಣದ ಅಂಬಾಲಾದಲ್ಲಿ ದಟ್ಟವಾದ ಮಂಜು ಮತ್ತು ಕೊರೆಯುವ ಚಳಿಯ ನಡುವೆ ಭಾರತ್ ಜೋಡೋ ಯಾತ್ರೆಯನ್ನು ಪುನರಾರಂಭಿಸಿದರು. ಮಧ್ಯಾಹ್ನ ಪಂಜಾಬ್ ಪ್ರವೇಶಿಸುತ್ತಿದ್ದಂತೆ ಗೋಲ್ಡನ್ ಟೆಂಪಲ್ ಗೆ ಭೇಟಿ ನೀಡಿದರು.

ಸೋಮವಾರ, ಭಾರತ್ ಜೋಡೋ ಯಾತ್ರೆಯನ್ನು ಮಹಿಳೆಯರು ಮತ್ತು ಮಹಿಳಾ ಸಬಲೀಕರಣಕ್ಕಾಗಿ ಸಮರ್ಪಿಸಲಾಗಿತ್ತು.

ಜನವರಿ 20 ರಂದು ಜಮ್ಮು ಮತ್ತು ಕಾಶ್ಮೀರವನ್ನು ಪ್ರವೇಶಿಸಲಿದೆ. ಜನವರಿ 30 ರಂದು ಶ್ರೀನಗರದಲ್ಲಿ ತ್ರಿವರ್ಣ ಧ್ವಜಾರೋಹಣದೊಂದಿಗೆ ಯಾತ್ರೆ ಕೊನೆಗೊಳ್ಳಲಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!