ಭಾರತ್​ ಜೋಡೋ ಯಾತ್ರೆ: ರಾಗಾ, ಪ್ರಿಯಾಂಕಾಗೆ ಸಾಥ್​ ನೀಡಿದ ಫಾರೂಕ್ ಅಬ್ದುಲ್ಲಾ

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ಕಾಂಗ್ರೆಸ್​ ನಾಯಕ ರಾಹುಲ್​ ಗಾಂಧಿ ನೇತೃತ್ವದಲ್ಲಿ ನಡೆಯುತ್ತಿರುವ ಭಾರತ್​ ಜೋಡೋ ಯಾತ್ರೆಯಲ್ಲಿ ನ್ಯಾಷನಲ್ ಕಾನ್ಫರೆನ್ಸ್ ಪಕ್ಷದ ನಾಯಕ ಫಾರೂಕ್ ಅಬ್ದುಲ್ಲಾ ಸಾಥ್ ನೀಡಿದ್ದಾರೆ.

ಉತ್ತರ ಪ್ರದೇಶದಲ್ಲಿ ಕಾಂಗ್ರೆಸ್​ ಪಾದಯಾತ್ರೆಯಲ್ಲಿ ಜಮ್ಮು ಮತ್ತು ಕಾಶ್ಮೀರದ ಮಾಜಿ ಮುಖ್ಯಮಂತ್ರಿಯೂ ಆಗಿರುವ ಅಬ್ದುಲ್ಲಾ ಜೊತೆಯಾಗಿದ್ದಾರೆ.

9 ದಿನಗಳ ಕಾಲ ಯಾತ್ರೆಗೆ ವಿರಾಮ ಇತ್ತು. ಇಂದಿನಿಂದ ಮತ್ತೆ ಭಾರತ್​ ಜೋಡೋ ಯಾತ್ರೆ ಆರಂಭವಾಗಿದ್ದು, ದೆಹಲಿ ಮೂಲಕ ಉತ್ತರ ಪ್ರದೇಶವನ್ನು ಪ್ರವೇಶಿಸಿದೆ. ಇಲ್ಲಿ ಫಾರೂಕ್ ಅಬ್ದುಲ್ಲಾ ಯಾತ್ರೆಯಲ್ಲಿ ಭಾಗಿಯಾಗಿದ್ದಾರೆ. ಭಾರತ್​ ಜೋಡೋ ಯಾತ್ರೆಗೆ ಬಂದ ಅಬ್ದುಲ್ಲಾ ಅವರನ್ನು ರಾಹುಲ್​ ಗಾಂಧಿ ತಬ್ಬಿಕೊಳ್ಳುವ ಮೂಲಕ ಸ್ವಾಗತಿಸಿದ್ದಾರೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!