ಶೀಘ್ರವೇ ಶುರುವಾಗಲಿದೆ ‘ಭಾರತ್ ಸಹಕಾರ ಟ್ಯಾಕ್ಸಿ’ ಸೇವೆ: ಚಾಲಕರ ಖಾತೆಗೆ ನೇರವಾಗಿ ಲಾಭದ ಹಣ ಸಂದಾಯ!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಅಂತಾರಾಷ್ಟ್ರೀಯ ಸಹಕಾರ ವರ್ಷದ ಅಂಗವಾಗಿ ಮುಂಬೈನಲ್ಲಿ ಇಂದು ನಡೆದ ರಾಷ್ಟ್ರೀಯ ವಿಚಾರ ಸಂಕಿರಣದಲ್ಲಿ ಕೇಂದ್ರ ಗೃಹ ಮತ್ತು ಸಹಕಾರ ಸಚಿವ ಅಮಿತ್ ಶಾ ಪಾಲ್ಗೊಂಡರು. ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ಸಮಾರಂಭ ಉದ್ದೇಶಿಸಿ ಮಾತನಾಡಿದ ಸಚಿವ ಅಮಿತ್ ಶಾ, ದೇಶದ ರೈತರಿಗೆ ಅನುಕೂಲವಾಗುವಂತೆ ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆ ನಿಗದಿಪಡಿಸಲಾಗಿದ್ದು, ರಾಷ್ಟ್ರೀಯ ಕೃಷಿ ಸಹಕಾರ ಮಾರುಕಟ್ಟೆ ಒಕ್ಕೂಟದಿಂದ ನೇರವಾಗಿ ಖರೀದಿ ಮಾಡಲಾಗುತ್ತಿದೆ. ಸಹಕಾರ ವಲಯದ ಬಲವರ್ಧನೆಗೆ ಕೇಂದ್ರ ಸರ್ಕಾರ ನಿರಂತರವಾಗಿ ಸುಧಾರಣಾ ಕ್ರಮಗಳನ್ನು ಕೈಗೊಳ್ಳುತ್ತಿದೆ ಎಂದು ಹೇಳಿದರು. ಸಹಕಾರ ವಲಯದ ಪ್ರಾಮುಖ್ಯತೆಯನ್ನು ಮನಗಂಡು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರತ್ಯೇಕ ಸಚಿವಾಲಯ ಸ್ಥಾಪಿಸಿದೆ. ಇದರ ಮೂಲಕ ಹಲವು ಯೋಜನೆಗಳನ್ನು ರೂಪಿಸಲಾಗಿದ್ದು, ಪ್ರಾಥಮಿಕ ಕೃಷಿ ಸಹಕಾರಿ ಪತ್ತಿನ ಸಂಘಗಳನ್ನು ಸಶಕ್ತಗೊಳಿಸಲಾಗುತ್ತಿದೆ. ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಹಲವಾರು ಯೋಜನೆಗಳಲ್ಲಿ ಈ ಸಹಕಾರ ಸಂಘಗಳನ್ನು ಸೇರ್ಪಡೆಗೊಳಿಸಲಾಗಿದೆ ಎಂದು ತಿಳಿಸಿದರು.

ಸಹಕಾರದ ಮಾದರಿಯನ್ನು ಆಧರಿಸಿ ಮುಂದಿನ ದಿನಗಳಲ್ಲಿ ರಾಷ್ಟ್ರೀಯ ಟ್ಯಾಕ್ಸಿ ಸೇವೆ ಆರಂಭಿಸಲಾಗುವುದು. “ಭಾರತ್ ಸಹಕಾರ ಟ್ಯಾಕ್ಸಿ’ ಸೇವೆಯಲ್ಲಿ ಟ್ಯಾಕ್ಸಿ ಚಾಲಕರು ಸ್ವತಃ ಮಾಲೀಕತ್ವ ಹೊಂದಲಿದ್ದಾರೆ. ಟ್ಯಾಕ್ಸಿ ಚಾಲಕರ ಖಾತೆಗೆ ನೇರವಾಗಿ ಲಾಭದ ಹಣ ಸಂದಾಯವಾಗಲಿದೆ ಎಂದು ಹೇಳಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!