ಹೊಸದಿಗಂತ ಡಿಜಿಟಲ್ ಡೆಸ್ಕ್
ಬೆಂಗಳೂರು: ಬೆಂಗಳೂರಿನಲ್ಲಿರುವ ಜವಹರಲಾಲ್ ಉನ್ನತ ವಿಜ್ಞಾನ ಅಧ್ಯಯನ ಕೇಂದ್ರದ ಮುಖ್ಯಸ್ಥರಾಗಿರುವ ರಾವ್ ಅವರಿಗೆ ಇಟಲಿ ಸರಕಾರದ ಪ್ರತಿಷ್ಠಿತ ಎನಿ ಎನರ್ಜಿ ಫ್ರೊಂಟೈರ್ಸ್ 2020 ಪ್ರಶಸ್ತಿ ನೀಡಿ ಗೌರವಿಸಲಾಯಿತು.
ಬೆಂಗಳೂರಿನಲ್ಲಿ ಜವಾಹರಲಾಲ್ ನೆಹರು ಸೆಂಟರ್ ಫಾರ್ ಅಡ್ವಾನ್ಸಡ್ ಸೈಂಟಿಫಿಕ್ ರಿಸರ್ಚ್ ಸಭಾಭವನದಲ್ಲಿ ಆಯೋಜಿಸಲಾಗಿದ್ದ ಸಮಾರಂಭದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಪ್ರಶಸ್ತಿ ಪ್ರದಾನ ಮಾಡಿದರು.
ಎನರ್ಜಿ ಕ್ಷೇತ್ರದಲ್ಲಿ ಮಾಡಿದ ಸಾಧನೆಗೆ ನೀಡಲಾಗುವ ಇಟಲಿ ಸರಕಾರದ ಪ್ರಶಸ್ತಿ ಇದಾಗಿದೆ. ಈ ಪ್ರಶಸ್ತಿಯನ್ನು ಎನರ್ಜಿ ಕ್ಷೇತ್ರದ ನೋಬಲ್ ಪ್ರಶಸ್ತಿ ಎಂದೇ ವ್ಯಾಖ್ಯಾನಿಸಲಾಗುತ್ತದೆ. ಪ್ರೊ. ರಾವ್ ಅವರು ಇಡೀ ಏಷ್ಯಾ ಖಂಡದಲ್ಲಿಯೇ ಈ ಪ್ರಶಸ್ತಿ ಪಡೆದ ಮೊದಲ ವಿಜ್ಞಾನಿ ಆಗಿದ್ದಾರೆ.
ಈ ಪ್ರಶಸ್ತಿಯನ್ನು ಈ ಹಿಂದೆಯೇ ಘೋಷಣೆ ಮಾಡಿದ್ದು, ಸಾಂಕ್ರಾಮಿಕ ವ್ಯಾದಿ ಕೋವಿಡ್ ಹಿನ್ನೆಲೆಯಲ್ಲಿ ಪ್ರದಾನ ಮಾಡಿರಲಿಲ್ಲ. ಬುಧವಾರ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಪ್ರಶಸ್ತಿ ಪ್ರದಾನ ಮಾಡಿದರು.
ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಡಾ. ಸಿ.ಎನ್. ಅಶ್ವತ್ಥ ನಾರಾಯಣ, ಡಾ. ಇಂದುಮತಿ ರಾವ್, ಜವಾಹರಲಾಲ್ ನೆಹರು ಸೆಂಟರ್ ಫಾರ್ ಅಡ್ವಾನ್ಸಡ್ ಸೈಂಟಿಫಿಕ್ ರಿಸರ್ಚ್ ಅಧ್ಯಕ್ಷ ಪ್ರೊ. ಜಿ.ಯು. ಕುಲಕರ್ಣಿ ಸೇರಿದಂತೆ ಅನೇಕ ವಿಜ್ಞಾನಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.