ಸಿಎಂ ಪುತ್ರ ಭರತ್ ಬೊಮ್ಮಾಯಿಗೂ ಕೊರೋನಾ ಪಾಸಿಟಿವ್

ಹೊಸದಿಗಂತ ಡಿಜಿಟಲ್ ಡೆಸ್ಕ್:

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಪುತ್ರ ಭರತ್ ಬೊಮ್ಮಾಯಿಗೂ ಕೋವಿಡ್ ಸೋಂಕು ದೃಢಪಟ್ಟಿದೆ.
ನಿನ್ನೆಯಷ್ಟೇ ಸಿಎಂ ಬೊಮ್ಮಾಯಿ ಅವರಿಗೆ ಸೋಂಕು ದೃಢಪಟ್ಟಿದ್ದು, ಕುಟುಂಬದವರು ಪರೀಕ್ಷೆ ಮಾಡಿಸಿದ್ದಾರೆ.
ಈ ವೇಳೆ ಪುತ್ರ ಭರತ್‌ಗೆ ಸೋಂಕು ತಗುಲಿರುವುದು ದೃಢಪಟ್ಟಿದೆ.
ಈ ಬಗ್ಗೆ ಭರತ್ ಟ್ವೀಟ್ ಮಾಡಿದ್ದು, ನನಗೆ ಕೋವಿಡ್ ಸೋಂಕು ತಗುಲಿದೆ. ಸೌಮ್ಯ ಲಕ್ಷಣಗಳಿವೆ. ಮನೆಯಲ್ಲೇ ಐಸೋಲೇಟ್ ಆಗಿದ್ದೇನೆ. ನನ್ನ ಸಂಪರ್ಕಕ್ಕೆ ಬಂದ ಎಲ್ಲರೂ ದಯವಿಟ್ಟು ಕೋವಿಡ್ ಟೆಸ್ಟ್ ಮಾಡಿಸಿ, ಮನೆಯಲ್ಲೇ ಇರಿ, ಆರೋಗ್ಯವಾಗಿರಿ ಎಂದಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!