ಹೊಸದಿಗಂತ ಡಿಜಿಟಲ್ ಡೆಸ್ಕ್:
ಭರ್ಜರಿ ಬ್ಯಾಚುಲರ್ ರಿಯಾಲಿಟಿ ಶೋನಲ್ಲಿ ಸ್ಪರ್ಧಿಯಾಗಿರುವ ನಟಿ ರಮೋಲಾ ಅವರಿಗೆ ಇದೀಗ ಸಂಕಷ್ಟ ಎದುರಾಗಿದೆ. ರಿಚ್ಚಿ ಸಿನಿಮಾದ ನಟ ರಿಚ್ಚಿ ಫಿಲಂ ಚೇಂಬರ್ ಗೆ ದೂರು ನೀಡಿದ್ದಾರೆ.
ನಟಿ ರಮೋಲಾ ಅವರು ‘ರಿಚ್ಚಿ’ ಹೆಸರಿನ ಸಿನಿಮಾದಲ್ಲಿ ನಟಿಸಿದ್ದರು. ಈ ಸಿನಿಮಾ ಸೆಟ್ಟೇರಿ ಬಹಳ ಸಮಯ ಕಳೆದಿದೆ. ಈಗ ಚಿತ್ರದ ನಾಯಕ, ನಿರ್ದೇಶಕ ಹಾಗೂ ನಿರ್ಮಾಪಕ ರಿಚ್ಚಿ ಅವರು ಈ ಬಗ್ಗೆ ಫಿಲ್ಮ್ ಚೇಂಬರ್‌ಗೆ ದೂರು ನೀಡಿದ್ದಾರೆ. ಸಿನಿಮಾದ ಪ್ರಮೋಷನ್ಗೆ ರಮೋಲಾ ಬರುತ್ತಿಲ್ಲ, ಅವರು ಕರೆಯನ್ನು ಸ್ವೀಕರಿಸುತ್ತಿಲ್ಲ ಎಂದು ಆರೋಪಿಸಲಾಗಿದೆ.
ಸಿನಿಮಾ ಚೆನ್ನಾಗಿ ಪ್ರದರ್ಶನ ಕಾಣಲು ಪ್ರಚಾರದ ಅಗತ್ಯವಿದೆ. ಹಾಗಾಗಿ ಪ್ರಚಾರಕ್ಕೆ ಬಂದು ಸಿನಿಮಾಗೆ ಸಪೋರ್ಟ್ ಮಾಡಿ ಎಂದು ಹಲವು ಬಾರಿ ಫೋನ್ ಮಾಡಿದ್ದೆವು. ಆದರೆ ರಮೋಲಾ ಯಾವ ರೀತಿಯಲ್ಲೂ ಸ್ಪಂದಿಸಲಿಲ್ಲ ಎಂದು ನಿರ್ದೇಶಕ ಹೇಳಿದ್ದಾರೆ.
ರಿಚ್ಚಿ ಸಿನಿಮಾದಲ್ಲಿ ರಮೋಲಾ ನಾಯಕಿಯ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಸಿನಿಮಾ ಪ್ರಮೋಷನ್ಸ್ ಬನ್ನಿ ಎಂದರೆ ಬರುತ್ತಿಲ್ಲ ಎಂದು ನಿರ್ಮಾಪಕ ಹೇಮಂತ್ ರಿಚ್ಚಿ ಫಿಲ್ಮ್ ಚೇಂಬರ್‌ಗೆ ದೂರು ಕೊಟ್ಟಿದ್ದಾರೆ. ದೂರು ದಾಖಲಾದ ಬಳಿಕ ನಟಿ ಈ ಕುರಿತು ಎಲ್ಲಿಯೂ ಪ್ರತಿಕ್ರಿಯೆ ನೀಡಿಲ್ಲ. ಸದ್ಯಕ್ಕೆ ನಟಿ ಮೇಲೆ ದೂರು ದಾಖಲಾಗಿದ್ದು ಮುಂದೇನು ನಡೆಯಲಿದೆ ಎಂಬ ಕುತೂಹಲ ಸೃಷ್ಟಿಯಾಗಿದೆ.