ಹೊಸದಿಗಂತ ಡಿಜಿಟಲ್ ಡೆಸ್ಕ್:
ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 1.96 ಕೋಟಿ ಮೌಲ್ಯದ ಚಿನ್ನವನ್ನು ಕಸ್ಟಮ್ಸ್ ಅಧಿಕಾರಿಗಳು ಜಪ್ತಿ ಮಾಡಲಾಗಿದೆ.
ದುಬೈನಿಂದ ಬಂದಿದ್ದ ಮೂವರು ಪುರುಷರು ಮತ್ತು ಮಹಿಳೆಯನ್ನು ಅಧಿಕಾರಿಗಳು ಪರಿಶೀಲಿಸಿದಾಗ, ಅವರು ತಮ್ಮ ಜೀನ್ಸ್ ಪ್ಯಾಂಟ್ ಹಾಗೂ ಟೀ ಶರ್ಟ್‍ಗಳಲ್ಲಿ ಅಕ್ರಮವಾಗಿ ಚಿನ್ನವನ್ನು ಪೇಸ್ಟ್ ರೂಪದಲ್ಲಿ ಬಚ್ಚಿಟ್ಟಿರುವುದು ಕಂಡುಬಂದಿದೆ. ಅಧಿಕಾರಿಗಳ ಪ್ರಕಾರ, ನಾಲ್ವರು ಪ್ರಯಾಣಿಕರಿಂದ ತಲಾ 2 ಕೆಜಿ 864 ಗ್ರಾಂ ತೂಕದ ಚಿನ್ನವನ್ನು ವಶಪಡಿಸಿಕೊಳ್ಳಲಾಗಿದೆ.
ಅಧಿಕಾರಿಗಳು ನಾಲ್ವರನ್ನು ಬಂಧಿಸಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.