ಎಡಿಜಿಪಿ ಹುದ್ದೆಗೆ ಗುಡ್ ಬೈ ಹೇಳಿದ ಭಾಸ್ಕರ್ ರಾವ್

ಹೊಸದಿಗಂತ ಡಿಜಿಟಲ್‌ ಡೆಸ್ಕ್‌

ಐಪಿಎಸ್ ಸೇವೆಗೆ ಭಾಸ್ಕರ್ ರಾವ್ ಅವರು ಗುಡ್ ಬೈ ಹೇಳಿದ್ದಾರೆ. ತಮ್ಮ ರಾಜೀನಾಮೆ ಕುರಿತು ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಮಾಹಿತಿ ನೀಡಿ ಅಧಿಕಾರ ಹಸ್ತಾಂತರ ಮಾಡಿದ್ದಾರೆ.
ಈ ಮುನ್ನ ಸ್ವಯಂ ನಿವೃತ್ತಿ ಕೋರಿ 2021ರ ಸೆಪ್ಟೆಂಬರ್ 16ರಂದು ಅವರು ಅರ್ಜಿ ಸಲ್ಲಿಸಿದ್ದರು. ನಿರ್ಧಾರ ಪುನರ್ಪರಿಶೀಲನೆ ಮಾಡುವಂತೆ ಕೇಂದ್ರ ಸರ್ಕಾರದಿಂದ ಅವಕಾಶ ನೀಡಲಾಗಿದ್ದು, ಗೃಹಸಚಿವಾಲಯವು ಸಂಬಂಧಿಸಿದ ಅಧಿಕಾರಿಯನ್ನು ಸಂಪರ್ಕಿಸಬೇಕಿತ್ತು. ಆದರೆ, 6 ತಿಂಗಳಾದರೂ ಸಚಿವಾಲಯದಿಂದ ಉತ್ತರ ಬಾರದ ಹಿನ್ನೆಲೆಯಲ್ಲಿ ಆಲ್ ಇಂಡಿಯಾ ಸರ್ವಿಸ್ ಆಕ್ಟ್ 16(2) ನಡಿ ಸೇವೆಗೆ ಭಾಸ್ಕರ್ ರಾವ್ ರಾಜೀನಾಮೆ ಘೋಷಿಸಿದ್ದಾರೆ.
ಪ್ರಸ್ತುತ ರೈಲ್ವೆ ಇಲಾಖೆಯ ಎಡಿಜಿಪಿಯಾಗಿ ಭಾಸ್ಕರ್ ರಾವ್ ಕಾರ್ಯನಿರ್ವಹಿಸುತ್ತಿದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!