Thursday, February 2, 2023

Latest Posts

ಭಟ್ಟಾಚಾರ್ಯ ‘ಗುಲಾಂ’ ಅಲ್ಲ, ‘ಆಜಾದ್’ ಆಗಲು ಬಯಸುತ್ತಿದ್ದಾರೆ: ಜೈರಾಮ್ ರಮೇಶ್

ಹೊಸದಿಗಂತ ಡಿಜಿಟಲ್ ಡೆಸ್ಕ್:

ಕಾಂಗ್ರೆಸ್ ನಾಯಕ ಗುಲಾಂ ನಬಿ ಆಜಾದ್‌ಗೆ ಪದ್ಮಭೂಷಣ ಪ್ರಶಸ್ತಿ ಒಲಿದಿದೆ. ಈ ಬಗ್ಗೆ ಕಾಂಗ್ರೆಸ್ ನಾಯಕರ ವಲಯದಲ್ಲಿ ಸಾಕಷ್ಟು ಚರ್ಚೆಯಾಗುತ್ತಿದ್ದು, ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ.

ಕಾಂಗ್ರೆಸ್ ಮುಖಂಡ ಶಶಿ ತರೂರ್ ಗುಲಾಂ ನಬಿ ಆಜಾದ್ ಅವರಿಗೆ ಶುಭಾಶಯ ತಿಳಿಸಿದ್ದಾರೆ. ಇನ್ನೊಬ್ಬ ನಾಯಕ ಜೈರಾಮ್ ರಮೇಶ್ ಗುಲಾಂ ನಬಿ ಆಜಾದ್ ವಿರುದ್ಧ ಪರೋಕ್ಷ ವಾಗ್ದಾಳಿ ನಡೆಸಿದ್ದಾರೆ.

ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಬುದ್ಧದೇವ್ ಭಟ್ಟಾಚಾರ್ಯ ಪದ್ಮ ಪ್ರಶಸ್ತಿ ತಿರಸ್ಕರಿಸಿದ್ದಾರೆ. ಈ ಬಗ್ಗೆ ನನಗೇನೂ ತಿಳಿದಿಲ್ಲ. ಆದರೆ ಪ್ರಶಸ್ತಿ ಬಂದಿರುವುದು ನಿಜವೇ ಆದರೆ ಅದನ್ನು ಸ್ವೀಕರಿಸುವುದಿಲ್ಲ ಎಂದಿದ್ದಾರೆ. ಇದನ್ನು ಜೈರಾಮ್ ರಮೇಶ್ ರೀಟ್ವೀಟ್ ಮಾಡಿದ್ದು, ಸರಿಯಾಗಿಯೇ ಮಾಡಿದ್ದಾರೆ. ಅವರು (ಬುದ್ಧದೇವ್ ಭಟ್ಟಾಚಾರ್ಯ) ಗುಲಾಂ(ಗುಲಾಮ) ಅಲ್ಲ, ಆಜಾದ್( ಸ್ವತಂತ್ರ್ಯ) ಆಗಲು ಬಯಸುತ್ತಾರೆ ಎಂದು ಹೇಳಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!