ಹೊಸದಿಗಂತ ಡಿಜಿಟಲ್ ಡೆಸ್ಕ್:
ಕೆ.ಆರ್.ನಗರ ಸಂತ್ರಸ್ತೆ ಅಪಹರಣ ಪ್ರಕರಣದಲ್ಲಿ ಮಾಜಿ ಸಚಿವ ಹೆಚ್.ಡಿ ರೇವಣ್ಣ ಪತ್ನಿ ಭವಾನಿ ರೇವಣ್ಣಗೆ ಕೊಂಚ ರಿಲೀಫ್ ಸಿಕ್ಕಿದ್ದು, ಹೀಗಾಗಿ 10 ತಿಂಗಳ ಬಳಿಕ ಹಾಸನ ಜಿಲ್ಲೆಗೆ ಆಗಮಿಸಿದ್ದಾರೆ
ಮೂರು ದಿನಗಳ ಹಿಂದೆಯಷ್ಟೇ ಮೈಸೂರು ಮತ್ತು ಹಾಸನ ಜಿಲ್ಲೆ ಪ್ರವೇಸಿಸಲು ಭವಾನಿ ರೇವಣ್ಣಗೆ ಹೈಕೋರ್ಟ್ ಅನುಮತಿ ನೀಡಿತ್ತು. ಹೀಗಾಗಿ ಹಾಸನಕ್ಕೆ ಬರುತ್ತಿದ್ದಂತೆ ಜಿಲ್ಲೆಯ ಗಡಿಭಾಗ ಹಿರಿಸಾವೆ, ಚನ್ನರಾಯಪಟ್ಟಣ ಹಾಗೂ ಹೊಳೆನರಸೀಪುರದಲ್ಲಿ ಜೆಡಿಎಸ್ ಕಾರ್ಯಕರ್ತರು ಭವಾನಿ ರೇವಣ್ಣ ಅವರನ್ನು ಸ್ವಾಗತಿಸಿದ್ದಾರೆ. ಹೂಮಳೆ ಸುರಿಸಿ, ಆರತಿ ಬೆಳಗಿ ಬರಮಾಡಿಕೊಂಡಿದ್ದಾರೆ. ಪಟಾಕಿ ಸಿಡಿಸಿ, ಜೈಕಾರ ಕೂಗಿ ಸಂಭ್ರಮಿಸಿದ್ದಾರೆ.
ಈ ಹಿಂದೆ ಭವಾನಿ ರೇವಣ್ಣ ಅವರು ಮೈಸೂರು ಮತ್ತು ಹಾಸನಜಿಲ್ಲೆ ಪ್ರವೇಶಿಸದಂತೆ ಷರತ್ತು ವಿಧಿಸಿ ಹೈಕೋರ್ಟ್ ನಿರೀಕ್ಷಣಾ ಜಾಮೀನು ನೀಡಿತ್ತು. ಇದೀಗ ಷರತ್ತನ್ನು ಸಡಿಲಿಸಿದ್ದು, ಹಾಸನ ಮತ್ತು ಮೈಸೂರು ಜಿಲ್ಲೆಗೆ ಪ್ರವೇಶಿಸಲು ಅನುಮತಿ ನೀಡಿದೆ. ಆದರೆ, ಸಂತ್ರಸ್ತೆ ಮತ್ತು ಪ್ರಕರಣದ ಸಾಕ್ಷಿಗಳ ಮನೆಯ 500 ಮೀ. ಸುತ್ತಳತೆಯಲ್ಲಿ ಪ್ರವೇಶಿಸುವಂತಿಲ್ಲ ಎಂದು ನ್ಯಾ.ಪ್ರದೀಪ್ ಸಿಂಗ್ ಯೆರೂರ್ ಅವರಿದ್ದ ಏಕಸದಸ್ಯ ಪೀಠ ಹೊಸ ಷರತ್ತು ವಿಧಿಸಿದೆ.