ಹೊಸದಿಗಂತ ಡಿಜಿಟಲ್ ಡೆಸ್ಕ್:
ಭೀಮ್ ಆರ್ಮಿ ಮುಖ್ಯಸ್ಥ (Bhim Army Chief) ಚಂದ್ರಶೇಖರ್ ಆಜಾದ್ (Chandrashekhar Azad) ಮೇಲಿನ ಗುಂಡಿನ ದಾಳಿ ಪ್ರಕರಣ ಸಂಬಂಧ ಉತ್ತರ ಪ್ರದೇಶ (Uttar Pradesh) ಪೊಲೀಸರ ಸಹಕಾರದೊಂದಿಗೆ ಹರಿಯಾಣ ವಿಶೇಷ ಕಾರ್ಯಪಡೆಯ ಅಂಬಾಲಾ ಘಟಕವು ನಾಲ್ವರು ಆರೋಪಿಗಳನ್ನು ಬಂಧಿಸಿದೆ.
ಅಂಬಾಲಾದ ಶಹಜಾದ್‌ಪುರ ಪ್ರದೇಶದ ಧಾಬಾ ಬಳಿ ನಾಲ್ವರನ್ನು ಬಂಧಿಸಲಾಗಿದೆ ಎಂದು ಅಂಬಾಲಾ ಎಸ್‌ಟಿಎಫ್ ಘಟಕದ ಉಪ ಪೊಲೀಸ್ ಅಧೀಕ್ಷಕ (ಡಿಎಸ್‌ಪಿ) ಅಮನ್ ಕುಮಾರ್ ತಿಳಿಸಿದ್ದಾರೆ.
ಬಂಧಿತ ಆರೋಪಿಗಳನ್ನು ವಿಕಾಸ್, ಪ್ರಶಾಂತ್ ಮತ್ತು ಲೋವಿಶ್ ಎಂದು ಗುರುತಿಸಲಾಗಿದ್ದು, ಇವರೆಲ್ಲರೂ ಯುಪಿಯ ಸಹರಾನ್‌ಪುರದವರು. ನಾಲ್ಕನೇ ಆರೋಪಿ ವಿಕಾಸ್ ಹರಿಯಾಣದ ಕರ್ನಾಲ್ ಮೂಲದವ ಎಂದು ತಿಳಿದುಬಂದಿದೆ.
ಆರೋಪಿಗಳನ್ನು ಹೆಚ್ಚಿನ ತನಿಖೆಗಾಗಿ ಯುಪಿ ಪೊಲೀಸರಿಗೆ ಹಸ್ತಾಂತರಿಸಲಾಗಿದೆ.
ಪ್ರಕರಣ ಸಂಬಂಧ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 307 ರ ಅಡಿಯಲ್ಲಿ ಕೊಲೆ ಯತ್ನದ ಪ್ರಕರಣವನ್ನು ದಾಖಲಿಸಿದ್ದಾರೆ. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ (ದೌರ್ಜನ್ಯ ತಡೆ) ಕಾಯ್ದೆ, 1989 ರ ಸಂಬಂಧಿತ ವಿಭಾಗಗಳ ಅಡಿಯಲ್ಲಿ ದೇವ್ಬಂದ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.