ಹೊಸದಿಗಂತ ಡಿಜಿಟಲ್ ಡೆಸ್ಕ್:
ಭೀಮನ ಅಮಾವಾಸ್ಯೆಗೆ ಬಹುಭಾಷಾ ನಟಿ ಪ್ರಣಿತಾ ಪತಿ ಪಾದಾ ಪೂಜೆ ಮಾಡಿದ್ದಾರೆ.
ಪೂಜೆಯ ಫೋಟೋವನ್ನು ನಟಿ ಸಾಮಾಜಿಕ ಜಾಲತಾಣದಲ್ಲಿ ನಟಿ ಶೇರ್ ಮಾಡಿದ್ದಾರೆ.
ಇಂದು ಬೆಳಿಗ್ಗೆ ಭೀಮನ ಅಮಾವಾಸ್ಯೆಯಂದು(Bheemana Amavasye) ಪತಿ ನಿತಿನ್‌ಗೆ(Nithin) ಪಾದ ಪೂಜೆ ಮಾಡಿರುವ ಫೋಟೋವನ್ನ ನಟಿ ಶೇರ್ ಮಾಡಿದ್ದಾರೆ. ಸನಾತನ ಧರ್ಮದಲ್ಲಿ ಭೀಮನ ಅಮಾವಾಸ್ಯೆಗೆ ಹೆಚ್ಚಿನ ಮಹತ್ವವಿದೆ ಎಂದು ಎಂದಿದ್ದಾರೆ. ದೇವಿಯರನ್ನು ಸಮಾನವಾಗಿ ಪೂಜಿಸುವ ಕೆಲವು ನಂಬಿಕೆಗಳಲ್ಲಿ ಇದು ಒಂದಾಗಿದೆ ಎಂದು ನಟಿ ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿದ್ದಾರೆ.
ಕನ್ನಡ ಸಿನಿಮಾ ಮೂಲಕ ಸಿನಿ ರಂಗಕ್ಕ ಎಂಟ್ರಿ ಕೊಟ್ಟ ಪ್ರಣಿತಾ, ಹಿಂದಿ,ತೆಲುಗು, ತಮಿಳು ಸೇರಿದಂತೆ ಸ್ಟಾರ್ ನಟರ ಜೊತೆ ನಟಿಸಿದ್ದಾರೆ. ಡಿಮ್ಯಾಂಡ್ ಇರುವಾಗಲೇ ಉದ್ಯಮಿ ನಿತಿನ್ ಜೊತೆ ಲಾಕ್‌ಡೌನ್‌ನಲ್ಲಿ ಮದುವೆಯಾದರು. ಹಲವು ವರ್ಷಗಳ ಪ್ರೀತಿಗೆ ಗುರುಹಿರಿಯರ ಸಮ್ಮತಿ ಪಡೆದು ದಾಂಪತ್ಯ (Wedding) ಜೀವನಕ್ಕೆ ನಟಿ ಕಾಲಿಟ್ಟರು.