October 14, 2026
Wednesday, October 14, 2026
spot_img

ಭೀಮನ ಅಮಾವಾಸ್ಯೆ ಹಿನ್ನೆಲೆ: ಮಂಡ್ಯದ ಶಕ್ತಿ ದೇವಾಲಯಗಳಲ್ಲಿ ಭಕ್ತರ ದಂಡು, ವಿಶೇಷ ಪೂಜೆ

ಹೊಸದಿಗಂತ ವರದಿ ಮಂಡ್ಯ :

ಭೀಮನ ಅಮಾವಾಸ್ಯೆ ಅಂಗವಾಗಿ ಜಿಲ್ಲೆಯ ವಿವಿಧ ಶಕ್ತಿ ದೇವಾಲಯಗಳಲ್ಲಿ ಬುಧವಾರ ವಿಶೇಷ ಪೂಜಾ ಕಾರ್ಯಕ್ರಮ ನಡೆಯಿತು. ಭಕ್ತಾದಿಗಳು ಸರತಿ ಸಾಲಿನಲ್ಲಿ ನಿಂತು ದೇವರ ದರುಶನ ಪಡೆದು ಪುನೀತರಾದರು.

ಮಂಡ್ಯ ನಗರದ ಶ್ರೀ ಕಾಳಿಕಾಂಬ ದೇವಸ್ಥಾನ, ಚಾಮುಂಡೇಶ್ವರಿ ದೇವಸ್ಥಾನ, ಶಂಕರಪುರದಲ್ಲಿರುವ ಶ್ರೀ ಗಂಗಾಧರೇಶ್ವರ, ಶ್ರೀರಂಗಪಟ್ಟಣದ ಗಂಜಾಂನ ಶ್ರೀ ನಿಮಿಷಾಂಭ, ಕ್ಷಣಾಂಭಿಕೆ, ಲಕ್ಷ್ಮೀದೇವಿ, ಪಾಂಡವಪುರ ತಾಲೂಕಿನ ಆರತಿ ಉಕ್ಕಡ, ಮಹಾಕಾಳೀ ದೇವಸ್ಥಾನ, ಮಳವಳ್ಳಿ ತಾಲೂಕಿನ ದಂಡಿನ ಮಾರಮ್ಮ, ಪಟ್ಟಲದಮ್ಮ, ನಾಗಮಂಗಲ ತಾಲೂಕಿನ ಮುಳುಕಟ್ಟಮ್ಮ, ಲಕ್ಷ್ಮೀದೇವಿ, ಮದ್ದೂರು ತಾಲೂಕಿನ ಮದ್ದೂರಮ್ಮ, ಆದಿಶಕ್ತಿ, ಕೆ.ಆರ್. ಪೇಟೆ ತಾಲೂಕಿನ ಪಟ್ಟಲದಮ್ಮ, ಕಿಕ್ಕೇರಮ್ಮ ಸೇರಿದಂತೆ ವಿವಿಧ ದೇವಾಲಯಗಳಲ್ಲಿ ವಿಶೇಷ ಪೂಜೆ ನಡೆಯಿತು.

Must Read