ಹೊಸದಿಗಂತ ಡಿಜಿಟಲ್ ಡೆಸ್ಕ್:
ನೆರೆಯ ಮಹಾರಾಷ್ಟ್ರದಲ್ಲಿ ಭಾರಿ ಮಳೆ ಹಿನ್ನೆಲೆ ಉಜನಿ, ವೀರಾ ಜಲಾಶಯದಿಂದ 2.90 ಲಕ್ಷ ಕ್ಯೂಸೆಕ್ ನೀರನ್ನು ಭೀಮಾ ನದಿಗೆ ಬಿಡುಗಡೆ ಮಾಡಲಾಗಿದೆ. ಇದರಿಂದ ಭೀಮಾ ನದಿ ಪಾತ್ರದಲ್ಲಿ ಪ್ರವಾಹದ ಪರಿಸ್ಥಿತಿ ನಿರ್ಮಾಣವಾಗಿದೆ.
ತಾವರಖೇಡ ಗ್ರಾಮದಲ್ಲಿ ಪ್ರವಾಹದಲ್ಲಿ ಸಿಲುಕಿದ್ದ 8 ಮಂದಿಯನ್ನು ಅಗ್ನಿಶಾಮಕ ಸಿಬ್ಬಂದಿ ಬೋಟ್ ಮೂಲಕ ರಕ್ಷಣೆ ಮಾಡಿದ್ದಾರೆ. ಸದ್ಯ ತಾವರಖೇಡ ಗ್ರಾಮವನ್ನು ಭೀಮಾ ನದಿಯ ನೀರು ಸುತ್ತುವರೆದಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ.