ವಿಧಾನಸೌಧ ಮುಂಭಾಗದಲ್ಲಿ ಬಸವೇಶ್ವರ, ಕೆಂಪೇಗೌಡ ಪುತ್ಥಳಿ ಸ್ಥಾಪನೆಗೆ ಭೂಮಿಪೂಜೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ವಿಧಾನಸೌಧದ ಮುಂಭಾಗದಲ್ಲಿ ಬಸವೇಶ್ವರ, ನಾಡಪ್ರಭು ಕೆಂಪೇಗೌಡರ ಪುತ್ಥಳಿ ಸ್ಥಾಪನೆಗೆ ಸಿಎಂ ಬಸವರಾಜ ಬೊಮ್ಮಾಯಿ ಶುಕ್ರವಾರ ಭೂಮಿಪೂಜೆ ನೆರವೇರಿಸಿದ್ದಾರೆ.

ವಿಶ್ವಗುರು ಬಸವಣ್ಣ ಹಾಗೂ ನಾಡಪ್ರಭು ಕೆಂಪೇಗೌಡರ ಚಿಂತನೆಗಳನ್ನು ನಾಡಿಗೆ ತಲುಪಿಸುವ ಉದ್ದೇಶ ನಮ್ಮದು. ಹಾಗಾಗಿ ಈ ಮಹನೀಯರ ಪುತ್ಥಳಿಯನ್ನು ವಿಧಾನಸೌಧದ ಎದುರು ಸ್ಥಾಪಿಸಲಾಗುತ್ತದೆ. ಎರಡು ತಿಂಗಳೊಳಗೆ ಕಾರ್ಯ ಮುಗಿಸುತ್ತೇವೆ ಎಂದು ಸಿಎಂ ಬೊಮ್ಮಾಯಿ ಹೇಳಿದ್ದಾರೆ.

ಸುತ್ತೂರು ಮಠದ ಶಿವರಾತ್ರಿ ದೇಶೀಕೇಂದ್ರ ಸ್ವಾಮೀಜಿ, ಆದಿಚುಂಚನಗಿರಿ ಮಠದ ನಿರ್ಮಲಾನಂದನಾಥ ಸ್ವಾಮೀಜಿ, ವಿಶ್ವ ಒಕ್ಕಲಿಗರ ಮಹಾ ಸಂಸ್ಥಾನದ ಕುಮಾರ ಚಂದ್ರಶೇಖರನಾಥ ಸ್ವಾಮೀಜಿ, ಪಟ್ಟನಾಯಕನಹಳ್ಳಿಯ ಗುರುಗುಂಡ ಬ್ರಹ್ಮೇಶ್ವರ ಮಠದ ನಂಜಾವಧೂತ ಸ್ವಾಮೀಜಿ ಪೂಜೆಯಲ್ಲಿ ಪಾಲ್ಗೊಂಡಿದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!