ಭೋಪಾಲ್-ಉಜ್ಜಯಿನಿ ರೈಲು ಸ್ಫೋಟ ಪ್ರಕರಣ: 7 ಆರೋಪಿಗಳಿಗೆ ಮರಣದಂಡನೆ ಶಿಕ್ಷೆ ಪ್ರಕಟ!

ಹೊಸ ದಿಗಂತ ಡಿಜಿಟಲ್ ಡೆಸ್ಕ್:
 
ಭೋಪಾಲ್-ಉಜ್ಜಯಿನಿ ಪ್ಯಾಸೆಂಜರ್ ರೈಲು ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ 8 ಅಪರಾಧಿಗಳ ಪೈಕಿ 7 ಮಂದಿಗೆ ಮರಣದಂಡನೆ ಶಿಕ್ಷೆ ನೀಡಲಾಗಿದೆ. ಮತ್ತೋರ್ವನಿಗೆ ಜೀವಾವಧಿ ಶಿಕ್ಷೆ ನೀಡಲಾಗಿದೆ.

2017ರಲ್ಲಿ ನಡೆದ ಘಟನಯಲ್ಲಿ 10 ಅಮಾಯಕ ಪ್ರಯಾಣಿಕರು ತೀವ್ರವಾಗಿ ಗಾಯಗೊಂಡಿದ್ದರು. ಪುಷ್ಪಕ ರೈಲು ಟಾರ್ಗೆಟ್ ಮಾಡಿ ಬಾಂಬ್ ಸ್ಫೋಟಿಸಲು ನಿರ್ಧರಿಸಲಾಗಿತ್ತು. ಆದರೆ ಅಂತಿಮ ಹಂತದಲ್ಲಿ ಭೋಪಾಲ್ ಉಜ್ಜೈನಿ ರೈಲಿನಲ್ಲಿ ಬಾಂಬ್ ಇಡಲಾಗಿತ್ತು.

ರಾಷ್ಟ್ರೀಯ ತನಿಖಾ ಸಂಸ್ಥೆ(NIA) ಹಲವರನ್ನು ಬಂಧಿಸಿ ವಿಚಾರಣೆ ನಡೆಸಿತ್ತು. ಇದೀಗ ಎನ್ಐಎ ವಿಶೇಷ ಕೋರ್ಟ್, ಆರೋಪಿಗಳ ಶಿಕ್ಷೆ ಪ್ರಕಟಿಸಿದೆ. 8 ಆರೋಪಿಗಳ ಪೈಕಿ 7 ಮಂದಿಗೆ ಮರಣದಂಡನೆ ಶಿಕ್ಷೆ ನೀಡಲಾಗಿದೆ.

ಇದೇ ಉಗ್ರರು ಪ್ರಧಾನಿ ನರೇಂದ್ರ ಮೋದಿಯವರ ರ‍್ಯಾಲಿಯಲ್ಲೂ ಬಾಂಬ್ ಸ್ಫೋಟಿಸಲು ಮಾಸ್ಟರ್ ಪ್ಲಾನ್ ರೆಡಿಮಾಡಿದ್ದರು.

ಎನ್ಐಎ ವಿಶೇಷ ನ್ಯಾಯಾಲಯ ಅಪರಾಧಿಗಳಾದ ಮೊಹಮ್ಮದ್ ಫೈಸಲ್, ಗೌಸ್ ಮೊಹಮ್ಮದ್, ಅಜರ್, ಅತೀಫ್ ಮುಜಾಫರ್, ಡ್ಯಾನಿಶ್, ಮೀರ್ ಹುಸೈನ್ ಹಾಗೂ ಆಸಿಫ್ ಇಕ್ಬಾಲ್‌ಗೆ ಮರಣದಂಡನೆ ಶಿಕ್ಷೆ ವಿಧಿಸಿದೆ. ಇನ್ನು ಆತಿಫ್ ಇರಾಕ್‌ಗೆ ಜೀವಾವಧಿ ಶಿಕ್ಷೆ ನೀಡಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!