ಹೊಸ ದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯ ಭೋವಿ ಅಭಿವೃದ್ಧಿ ನಿಗಮದ ಬಹುಕೋಟಿ ಹಗರಣದ ಆರೋಪಿಗಳಿಗೆ ಸೇರಿದ 26.27 ಕೋಟಿ ಮೌಲ್ಯದ ಸ್ಥಿರಾಸ್ತಿಯನ್ನು ಜಾರಿ ನಿರ್ದೇಶನಾಲಯ ಮುಟ್ಟುಗೋಲು ಹಾಕಿಕೊಂಡಿದೆ.
ಪ್ರಕರಣದ ಆರೋಪಿಗಳಾದ ಬಿ.ಕೆ.ನಾಗರಾಜಪ್ಪ. ಆರ್.ಲೀಲಾವತಿ ಮತ್ತು ಇತರೆ ಆರೋಪಿಗಳಿಗೆ ಸೇರಿದ ಆಸ್ತಿಯನ್ನು ಅಕ್ರಮ ಹಣ ವರ್ಗಾವಣೆ ಕಾಯ್ದೆಯಡಿ ಮುಟ್ಟುಗೋಲು ಹಾಕಿಕೊಳ್ಳಲಾಗಿದೆ ಎಂದು ಜಾರಿ ನಿರ್ದೇಶನಾಲಯ ತಿಳಿಸಿದೆ.
ಭೋವಿ ಸಮುದಾಯದ ಅಭ್ಯುದಯಕ್ಕೆ ಸರ್ಕಾರವು ಭೋವಿ ಅಭಿವೃದ್ಧಿ ನಿಗಮವನ್ನು ಸ್ಥಾಪಿಸಿದೆ. 2021-22ನೇ ಸಾಲಿನಲ್ಲಿ ಉದ್ಯಮಿಗಳಿಗೆ ಸಾಲ ನೀಡುವಾಗ ಅಕ್ರಮ ನಡೆದಿದ್ದು, ಲಕ್ಷಾಂತರ ರೂ. ಸಾಲಕೊಡಿಸುವುದಾಗಿ ಸಾರ್ವಜನಿಕರ ದಾಖಲೆ ದುರ್ಬಳಕೆ ಜೊತೆಗೆ 10 ಕೋಟಿ ರೂಪಾಯಿಗೂ ಹೆಚ್ಚು ಹಣ ಅಕ್ರಮವಾಗಿ ವರ್ಗಾವಣೆ ಮಾಡಿದ್ದ ಆರೋಪ ಕೇಳಿಬಂದಿತ್ತು.