ಯಾದಗಿರಿ ಜಿಲ್ಲೆಯ ನೂತನ ಡಿಸಿಯಾಗಿ ಭೋಯಲ್ ಹರ್ಷಲ್ ನೇಮಕ

ಹೊಸ ದಿಗಂತ ವರದಿ, ಯಾದಗಿರಿ:

ಜಿಲ್ಲೆಯ ನೂತನ ಜಿಲ್ಲಾಧಿಕಾರಿಯನ್ನಾಗಿ ಭೋಯಲ್ ಹರ್ಷಲ್ ನಾರಾಯಣರಾವ್ ಅವರನ್ನು ಸರ್ಕಾರ ಮಂಗಳವಾರ ನಿಯೋಜಿಸಿ ಆದೇಶ ಹೊರಡಿಸಿದೆ.

ಈಗಿದ್ದ ಜಿಲ್ಲಾಧಿಕಾರಿ ಡಾ.ಸುಶೀಲಾ ಬಿ. ಅವರನ್ನು ಕೆಕೆಆರ್ ಟಿಸಿ ನಿಗಮದ ಎಂಡಿಯಾಗಿ ವರ್ಗಾವಣೆ ಮಾಡಿದೆ. ಭೋಯಲ್ ಹರ್ಷಲ್ ಅವರು 2016ರ ಕರ್ನಾಟಕ ಕೇಡರ್ ನ ಐಎಎಸ್ ಅಧಿಕಾರಿಯಾಗಿದ್ದು, ಬೆಂಗಳೂರಿನ ಅಟಲ್ ಜನಸ್ನೇಹಿ ಕೇಂದ್ರದ ನಿರ್ದೇಶಕರಾಗಿ ಕರ್ತವ್ಯ ನಿರ್ವಹಿಸಿದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here