ಹೊಸದಿಗಂತ ಡಿಜಿಟಲ್ ಡೆಸ್ಕ್:
ಗುಜರಾತ್ ಮುಖ್ಯಮಂತ್ರಿಯಾಗಿ ಭೂಪೇಂದ್ರ ಪಟೇಲ್ ಸತತ ಎರಡನೇ ಬಾರಿಗೆ ಪ್ರಮಾಣ ವಚನ ಸ್ವೀಕರಿಸಿದ್ದಾರೆ.
ಗಾಂಧಿನಗರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ , ಕೇಂದ್ರ ಸಚಿವ ಅಮಿತ್ ಶಾ ಸೇರಿದಂತೆ ಹಲವು ಕೇಂದ್ರ ಸಚಿವರು, ವಿವಿಧ ರಾಜ್ಯದ ಮುಖ್ಯಮಂತ್ರಿಗಳು ಭಾಗವಹಿಸಿದರು.
ಭೂಪೇಂದ್ರ ಪಟೇಲ್ ಅವರಿಗೆ ಗುಜರಾತ್ ರಾಜ್ಯಪಾಲ ಆಚಾರ್ಯ ದೇವ್ ವ್ರತ್ ಪ್ರಮಾಣ ವಚನ ಬೋಧಿಸಿದರು.
ಪ್ರಮಾಣ ವಚನ ಸ್ವೀಕರಿಸಿದವರಲ್ಲಿ ಹೆಚ್ಚಿನವರು ಪಟೇಲ್ ಅವರ ಮೊದಲ ಅವಧಿಯ ಭಾಗವಾಗಿದ್ದರು. ಸಮಾರಂಭದಲ್ಲಿ ರಾಜ್ಯದ 200 ಸಾಧುಗಳು ಭಾಗವಹಿಸಿದ್ದರು, ಅವರನ್ನು ಸಮಾರಂಭಕ್ಕೆ ವಿಶೇಷವಾಗಿ ಆಹ್ವಾನಿಸಲಾಗಿದೆ.