ಹೊಸದಿಗಂತ ಡಿಜಿಟಲ್ ಡೆಸ್ಕ್ :
ರಾಷ್ಟ್ರಪತಿ ದ್ರೌಪದಿ ಮುರ್ಮು ಅವರ ಆಹ್ವಾನದ ಮೇರೆಗೆ ಭೂತಾನ್ ದೊರೆ ಜಿಗ್ಮೆ ಖೇಸರ್ ನಾಂಗ್ಯೆಲ್ ವಾಂಗ್‌ಚುಕ್ ಅವರು ಇಂದಿನಿಂದ ಮೂರು ದಿನಗಳ ಕಾಲ ಭಾರತ ಪ್ರವಾಸ ಕೈಗೊಳ್ಳಲಿದ್ದಾರೆ.
ಭೂತಾನ್ ದೊರೆಯೊಂದಿಗೆ ಅಲ್ಲಿನ ವಿದೇಶಾಂಗ ಸಚಿವರು ಮತ್ತು ಇತರ ಹಿರಿಯ ಅಧಿಕಾರಿಗಳ ನಿಯೋಗ ಕೂಡ ಇರುತ್ತಾರೆ.
ಭೂತಾನ್ ರಾಜ, ರಾಷ್ಟ್ರಪತಿ ದ್ರೌಪದಿ ಮುರ್ಮು ಮತ್ತು ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಲಿದ್ದಾರೆ.
ವಿದೇಶಾಂಗ ಸಚಿವ ಡಾ ಎಸ್ ಜೈಶಂಕರ್ ಮತ್ತು ಹಿರಿಯ ಅಧಿಕಾರಿಗಳು ಭೂತಾನ್‌ನಿಂದ ಆಗಮಿಸಿದ ಗಣ್ಯರನ್ನು ಭೇಟಿ ಮಾಡಲಿದ್ದಾರೆ.
ಈ ಭೇಟಿ ಉಭಯ ರಾಷ್ಟ್ರಗಳಿಗೂ ಮಹತ್ವದ್ದಾಗಿದ್ದು,ಆರ್ಥಿಕ ಹಾಗೂ ಅಭಿವೃದ್ಧಿ ಸಹಕಾರವನ್ನು ಮತ್ತಷ್ಟು ಗಾಢವಾಗಿಸುವ ಉದ್ದೇಶವನ್ನು ಹೊಂದಿದೆ ಎಂದು ಎಂಇಎ ಹೇಳಿದೆ.