ನಾಲಿಗೆ ಹರಿಬಿಟ್ಟ ಭುಟ್ಟೋ: ‘ಹೊಸ ಕೀಳು ಮಟ್ಟಕ್ಕೆ ಇಳಿದ ಪಾಕ್’ ಎಂದು ಗುಡುಗಿದ ಭಾರತ!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಅಂತಾರಾಷ್ಟ್ರೀಯ ವೇದಿಕೆಯಲ್ಲಿ ಪಾಕಿಸ್ತಾನದ ವಿದೇಶಾಂಗ ಸಚಿವ ಬಿಲಾವಲ್ ಭುಟ್ಟೋ ಜರ್ದಾರಿ ನಾಲಿಗೆ ಹರಿಬಿಟ್ಟಿದ್ದಾರೆ.

ನ್ಯೂಯಾರ್ಕ್ನಲ್ಲಿ ಬುಧವಾರ ಮತ್ತು ಗುರುವಾರ ನಡೆದ ವಿಶ್ವಸಂಸ್ಥೆಯ ಭದ್ರತಾ ಮಂಡಳಿಯ ತುರ್ತು ಸಭೆಯಲ್ಲಿ ನಿಮ್ಮ ದೇಶ ಭಯೋತ್ಪಾದನೆಯನ್ನು ಬೆಂಬಲಿಸುತ್ತಿದೆ ಎಂದು ಭಾರತದ ವಿದೇಶಾಂಗ ಸಚಿವ ಎಸ್ ಜೈಶಂಕರ್ ಪಾಕಿಸ್ತಾನವನ್ನು ತರಾಟೆಗೆ ತೆಗೆದುಕೊಂಡಿದ್ದರು.

ಇದರಿಂದ ತೀವ್ರ ಮುಜುಗರ ಅನುಭವಿಸಿದ್ದ ಪಾಕ್ ವಿದೇಶಾಂಗ ಮಂತ್ರಿ ಬಿಲಾವಲ್ ಭುಟ್ಟೋ, ಒಸಾಮಾ ಬಿನ್ ಲಾಡೆನ್ ಸತ್ತಿದ್ದಾನೆ. ಆದರೆ ಗುಜರಾತ್ನ ಕಟುಕ ಇನ್ನೂ ಬದುಕಿದ್ದಾನೆ ಮತ್ತು ಆತ ಭಾರತದ ಪ್ರಧಾನ ಮಂತ್ರಿ ಎಂದು ನಾಲಿಗೆ ಹರಿಬಿಟ್ಟಿದ್ದು, ದೇಶದೆಲ್ಲೆಡೆ ಆಕ್ರೋಶಕ್ಕೆ ಕಾರಣವಾಗಿದೆ.

ಭುಟ್ಟೋ ಹೇಳಿಕೆಗೆ ಪ್ರತಿಕ್ರಿಯಿಸಿದ ಭಾರತದ ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಕ್ತಾರ ಅರಿಂದಮ್ ಬಾಗ್ಚಿ, ಇದು ಪಾಕಿಸ್ತಾನಕ್ಕೂ ಹೊಸ ಕೀಳು ಮಟ್ಟದ ಹೇಳಿಕೆ ಎಂದು ಆಕ್ರೋಶ ವ್ಯಕ್ತಪಡಿಸಿದೆ.

‘ಮೇಡ್ ಇನ್ ಪಾಕಿಸ್ತಾನ’ ಭಯೋತ್ಪಾದನೆಯನ್ನು ನಿಲ್ಲಿಸಬೇಕಾಗಿದೆ. ಪಾಕಿಸ್ತಾನದ ವಿದೇಶಾಂಗ ಸಚಿವರ ಹತಾಶೆಯು ಭಯೋತ್ಪಾದನೆಯನ್ನು ತಮ್ಮ ರಾಜ್ಯ ನೀತಿಯ ಒಂದು ಭಾಗವನ್ನಾಗಿ ಮಾಡಿಕೊಂಡಿರುವ ತಮ್ಮದೇ ದೇಶದ ಭಯೋತ್ಪಾದಕ ಉದ್ಯಮಗಳ ಮಾಸ್ಟರ್ಮೈಂಡ್ಗಳಿಂದ ನಿರ್ದೇಶಿಸಲ್ಪಟ್ಟಿದೆ ಎಂದು ಬಾಗ್ಚಿ ತಿರುಗೇಟು ನೀಡಿದ್ದಾರೆ.

ದೆಹಲಿಯಲ್ಲೂ ಪ್ರತಿಭಟನೆ
ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವಿವಾದಾತ್ಮಕ ಹೇಳಿಕೆ ನೀಡಿದ ಪಾಕ್ ವಿರುದ್ಧ ದೆಹಲಿಯಲ್ಲಿ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ. ಚಾಣಕ್ಯಪುರಿ ಪೊಲೀಸ್ ಠಾಣೆ ಮುಂಭಾಗದಲ್ಲಿ ಸೇರಿದ ಕಾರ್ಯಕರ್ತರು ಪಾಕಿಸ್ತಾನದ ವಿರುದ್ಧ ಘೋಷಣೆ ಕೂಗಿದ್ದಾರೆ. ವಿದೇಶಾಂಗ ಸಚಿವ ಬಿಲ್ವಾಲಾ ಭಿಟ್ಟೋ ಕ್ಷಮೆಗೆ ಆಗ್ರಹಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!