Sunday, June 4, 2023

Latest Posts

ELECTION 2023 | ಬಿಜೆಪಿ ಪರ ಭುವನ್, ಹರ್ಷಿಕಾ ಪ್ರಚಾರ

ಹೊಸದಿಗಂತ ಡಿಜಿಟಲ್ ಡೆಸ್ಕ್:

ರಾಜ್ಯ ವಿಧಾನಸಭೆ ಚುನಾವಣೆಗೆ ಇನ್ನೇನು ಕೆಲವೇ ದಿನ ಬಾಕಿಯಿದ್ದು, ಸ್ಟಾರ್ ಪ್ರಚಾರಕರು ಕಣಕ್ಕಿಳಿದಿದ್ದಾರೆ. ಬಿಜೆಪಿ ಪರ ನಟ ಕಿಚ್ಚ ಸುದೀಪ್ ಪ್ರಚಾರ ಆರಂಭಿಸಿದ್ದಾರೆ. ಇತ್ತ ಗದಗದಲ್ಲಿ ನಟ ಭುವನ್ ಹಾಗೂ ನಟಿ ಹರ್ಷಿಕಾ ಪೂಣಚ್ಚ ಪ್ರಚಾರದಲ್ಲಿ ಬ್ಯುಸಿಯಾಗಿದ್ದಾರೆ.

ಗದಗದಲ್ಲಿ ಕಾಂಗ್ರೆಸ್‌ನ ಎಚ್.ಕೆ. ಪಾಟೀಲ್ ವಿರುದ್ಧ ಕಣಕ್ಕಿಳಿದಿರುವ ಬಿಜೆಪಿ ಅಭ್ಯರ್ಥಿ ಅನಿಲ್ ಮೆಣಸಿನಕಾಯಿ ಪರವಾಗಿ ಇವರು ಪ್ರಚಾರ ಮಾಡುತ್ತಿದ್ದಾರೆ.

ಸೊರ್ತೂರು, ಹಂಗನಕಟ್ಟಿ, ಅಂತೂರು ಬೆಂತೂರಿನಲ್ಲಿ ಭುವನ್ ಹಾಗೂ ಹರ್ಷಿಕಾ ಪ್ರಚಾರ ನಡೆಸುತ್ತಿದ್ದು, ಗ್ರಾಮಗಳ ಪ್ರತಿ ಮನೆ ಮನೆಗೂ ತೆರಳಿ ಮತಯಾಚನೆ ಮಾಡುತ್ತಿದ್ದಾರೆ. ವಲಸೆ ಸಮಸ್ಯೆ ತಡೆಯುವ ಆಲೋಚನೆ ಅನಿಲ್ ಅವರಿಗಿದೆ, ಇಲ್ಲಿಯೇ ಉದ್ಯೋಗ ಸೃಷ್ಟಿಮಾಡಿ, ನಿಮ್ಮ ಮನೆಮಕ್ಕಳು ನಿಮ್ಮೂರಲ್ಲಿಯೇ ಇರುವಂತೆ ಮಾಡುತ್ತಾರೆ ಎಂದು ಭರವಸೆ ನೀಡಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!