ಬಿಡದಿ ಟೌನ್‌ಶಿಪ್‌ ವಿವಾದ: ಸರ್ವೆಗೆ ಬಂದ ಅಧಿಕಾರಿಗಳಿಗೆ ಮಹಿಳೆಯರಿಂದ ಪೊರಕೆ ಸೇವೆ

ಹೊಸದಿಗಂತ ಡಿಜಿಟಲ್ ಡೆಸ್ಕ್: ಬಿಡದಿ ಟೌನ್‌ಶಿಪ್ ಯೋಜನೆಗೆ ಸಂಬಂಧಿಸಿದ ಭೂ ಸರ್ವೇ ಕಾರ್ಯ ಮತ್ತೆ ವಿವಾದಕ್ಕೆ ಕಾರಣವಾಗಿದೆ. ಮಂಡಲಹಳ್ಳಿ ಗ್ರಾಮದಲ್ಲಿ ಸರ್ವೆಗೆ ಬಂದ ಅಧಿಕಾರಿಗಳನ್ನು ರೈತರು ಹಾಗೂ ಮಹಿಳೆಯರು ತೀವ್ರವಾಗಿ ವಿರೋಧಿಸಿ, ಪೊರಕೆ ತೋರಿಸಿ ಪ್ರತಿಭಟನೆ ನಡೆಸಿದ ಘಟನೆ ನಡೆದಿದೆ. ಸರ್ವೇಗೆ ತೀವ್ರ ವಿರೋಧ ಜೆಎಂಸಿ ಸರ್ವೆಗಾಗಿ ಅಧಿಕಾರಿಗಳು ಗ್ರಾಮಕ್ಕೆ ಆಗಮಿಸಿದ್ದರೂ, ಯಾವುದೇ ಕಾರಣಕ್ಕೂ ಭೂಮಾಪನಕ್ಕೆ ಅವಕಾಶ ನೀಡುವುದಿಲ್ಲ ಎಂದು ರೈತರು ಪಟ್ಟು ಹಿಡಿದರು. ಅಧಿಕಾರಿಗಳ ವಾಹನವನ್ನು ಸುತ್ತುವರಿದು ಆಕ್ರೋಶ ವ್ಯಕ್ತಪಡಿಸಿದ ಪ್ರತಿಭಟನಾಕಾರರು ಸರ್ವೆ ಸ್ಥಗಿತಗೊಳಿಸುವಂತೆ ಒತ್ತಾಯಿಸಿದರು. … Continue reading ಬಿಡದಿ ಟೌನ್‌ಶಿಪ್‌ ವಿವಾದ: ಸರ್ವೆಗೆ ಬಂದ ಅಧಿಕಾರಿಗಳಿಗೆ ಮಹಿಳೆಯರಿಂದ ಪೊರಕೆ ಸೇವೆ