July 20, 2026
Monday, July 20, 2026
spot_img

ಕುಮಾರಸ್ವಾಮಿ ಮಾರ್ಗದರ್ಶನದಲ್ಲಿ ಬಿಡದಿ ಟೌನ್​ಶಿಪ್ ಯೋಜನೆ: ಸಿಎಂ ಡಿಕೆಶಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಬಿಡದಿ ಬಳಿ ಗ್ರೇಟರ್‌ ಬೆಂಗಳೂರು ಸಮಗ್ರ ಉಪನಗರ ವಿಚಾರ ಸದ್ಯ ಜಟಾಪಟಿಗೆ ಕಾರಣವಾಗಿದ್ದು, ಇದೇ ಜೂನ್‌ 22ಕ್ಕೆ ಬೃಹತ್‌ ಪ್ರತಿಭಟನೆಗೆ ರೈತರು ಸಜ್ಜಾಗಿದ್ದಾರೆ. ಇತ್ತ ಸಿಎಂ ಡಿ.ಕೆ. ಶಿವಕುಮಾರ್‌ ಮಾತನಾಡಿದ್ದು, ಎಚ್‌.ಡಿ. ಕುಮಾರಸ್ವಾಮಿ ಮಾರ್ಗದರ್ಶನದಲ್ಲಿ ಯೋಜನೆ ಮುಂದುವರಿಸುತ್ತೇವೆ ಎಂದು ಹೇಳಿದ್ದಾರೆ.

ದೆಹಲಿ ಭೇಟಿ ವೇಳೆ ಬಿಡದಿ ಟೌನ್​ಶಿಪ್ ಬಗ್ಗೆ ಚರ್ಚೆ ಮಾಡಿದ್ದೇನೆ. ಪ್ರಧಾನಿ ಮೋದಿ ಕೂಡ ಸಹಮತ ವ್ಯಕ್ತಪಡಿಸಿದ್ದಾರೆ ಎಂದು ಹೇಳಿದ್ದಾರೆ. ಬೆಂಗಳೂರಿನ ಮೇಲೆ ಒತ್ತಡವಿದೆ, ಟೌನ್​ಶಿಪ್ ಅಗತ್ಯವಿದೆ. ನೀನು ಒಳ್ಳೆಯ ಕೆಲಸ ಮಾಡುತ್ತಿದ್ದೀಯಾ. ನಾನು 7ರಿಂದ 8 ಟೌನ್​ಶಿಪ್ ಮಾಡಿದ್ದೇನೆ, ನೀವು ಮಾಡಿ. ನಿಮಗೆ ಶುಭ ಹಾರೈಸುತ್ತೇನೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ ಎಂದರು.

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಕನಸಿನ ಯೋಜನೆಯಾದ ಬಿಡದಿ ಟೌನ್‌ಶಿಪ್ ನಿರ್ಮಾಣಕ್ಕೆ ಸರ್ಕಾರ ಮುಂದಾಗಿದ್ದು, ಭೂಸ್ವಾಧೀನ ಪ್ರಕ್ರಿಯೆಯನ್ನು ಆರಂಭಿಸಿದೆ. ಆದರೆ, ಈ ಯೋಜನೆಗೆ ಅನ್ನದಾತರಿಂದ ತೀವ್ರ ವಿರೋಧ ವ್ಯಕ್ತವಾಗಿದೆ. ಯೋಜನೆಯ ಅಂತಿಮ ಅಧಿಸೂಚನೆ ಹೊರಡಿಸಿರುವ ಸರ್ಕಾರದ ನಡೆ ಖಂಡಿಸಿ ರೈತರು ಬೃಹತ್ ಹೋರಾಟಕ್ಕೆ ಸಜ್ಜಾಗಿದ್ದಾರೆ. ರಾಮನಗರದ ಎಪಿಎಂಸಿ ಆವರಣದ ರೈತಭವನದಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ, ಕರ್ನಾಟಕ ರಾಜ್ಯ ರೈತ ಸಂಘದ ನೇತೃತ್ವದಲ್ಲಿ ಜೂನ್ 22ರಂದು ‘ಬೈರಮಂಗಲ ಚಲೋ’ ಬೃಹತ್ ಪ್ರತಿಭಟನೆ ನಡೆಸಲು ತೀರ್ಮಾನಿಸಲಾಗಿದೆ. 

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !