ಹೊಸದಿಗಂತ ಡಿಜಿಟಲ್ ಡೆಸ್ಕ್:
ಬಸವಕಲ್ಯಾಣ ಪಟ್ಟಣದ ಈಶ್ವರ ಕಾಲೋನಿಯಲ್ಲಿ ಆಟವಾಡುತ್ತಿದ್ದ 6 ವರ್ಷದ ಬಾಲಕ ಶೇಖ್ ನುಸ್ತಕಿಮ್ ಅಕ್ಬರಲಿ ಆಕಸ್ಮಿಕವಾಗಿ ಬಾವಿಗೆ ಬಿದ್ದು ಮೃತಪಟ್ಟಿರುವ ಘಟನೆ ನಡೆದಿದೆ. ಮನೆಯ ಪಕ್ಕದಲ್ಲಿ ಆಟವಾಡುತ್ತಿದ್ದ ಸಂದರ್ಭದಲ್ಲಿ ಸಂಭವಿಸಿದ ಈ ಘಟನೆ ಗ್ರಾಮಸ್ಥರಲ್ಲೂ ಆತಂಕ ಮೂಡಿಸಿದೆ.
ಸ್ಥಳಕ್ಕೆ ಪೊಲೀಸರು ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿ ದೌಡಾಸಿ ಬಾಲಕನ ಶವವನ್ನು ಹೊರತೆಗೆದು ಮರಣೋತ್ತರ ಪರೀಕ್ಷೆಗೆ ಸರ್ಕಾರಿ ಆಸ್ಪತ್ರೆಗೆ ರವಾನಿಸಿದ್ದಾರೆ. ಈ ಘಟನೆ ಬಸವಕಲ್ಯಾಣ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಪ್ರಕರಣ ದಾಖಲಾಗಿ ತನಿಖೆ ಆರಂಭಿಸಲಾಗಿದೆ.