ಹೊಸದಿಗಂತ ಡಿಜಿಟಲ್ ಡೆಸ್ಕ್:
ಅಂಬೇಡ್ಕರ್ ಬಗ್ಗೆ ವಿವಾದಾತ್ಮಕ ಹೇಳಿಕೆಯನ್ನು ನೀಡಿದ ಕೇಂದ್ರ ಗೃಹಸಚಿವ ಅಮಿತ್ ಶಾ ಅವರ ರಾಜೀನಾಮೆಗೆ ಒತ್ತಾಯಿಸಿ ಇಂದು ಬೀದರ್ ಬಂದ್ಗೆ ಕರೆ ನೀಡಲಾಗಿದೆ.
ವಿವಿಧ ದಲಿತಪರ ಸಂಘಟನೆ ಒಕ್ಕೂಟದಿಂದ ಬೀದರ್ ಬಂದ್ಗೆ ಕರೆ ಕೊಟ್ಟಿದ್ದು, ದಲಿತ ಪರ ಸಂಘಟನೆಗಳು ಸೇರಿದಂತೆ ಹಲವು ಸಂಘಟನೆಗಳು ಬಂದ್ಗೆ ಬೆಂಬಲ ಸೂಚಿಸಿವೆ. ಅಂಗಡಿ ಮುಗ್ಗಟ್ಟು ಬಂದ್ ಮಾಡಿ ಅಂಗಡಿ ಮಾಲೀಕರು ಬೆಂಬಲ ಸೂಚಿಸಿದ್ದಾರೆ. ಬಂದ್ ಹಿನ್ನೆಲೆ ಬಹುತೇಕ ಸಾರಿಗೆ ಸಂಚಾರ ಬಂದ್ ಆಗಿದೆ.
ಬೆಳಗ್ಗೆ 8 ರಿಂದ ಸಂಜೆ 5 ರವರೆಗೆ ಬೀದರ್ ಬಂದ್ಗೆ ಕರೆ ನೀಡಲಾಗಿದೆ. ಬೀದರ್ ನಗರದ ಅಂಬೇಡ್ಕರ್ ವೃತ್ತದಲ್ಲಿ ಬೃಹತ್ ಪ್ರತಿಭಟನೆ ನಡೆಯಲಿದ್ದು, ಬೃಹತ್ ಬಹಿರಂಗ ಸಮಾವೇಶ ಕೂಡ ನಡೆಯಲಿದೆ. ಬೃಹತ್ ಬಂದ್ ಪ್ರತಿಭಟನೆಯಲ್ಲಿ ಸಾವಿರಾರು ಜನರು ಭಾಗಿಯಾಗಲಿದ್ದಾರೆ.