Friday, July 1, 2022

Latest Posts

ಉದ್ಯೋಗಕಾಂಕ್ಷಿಗಳಿಗೆ ಸಿಹಿ ಸುದ್ದಿ, ವಿವಿಧ ಇಲಾಖೆಗಳಿಂದ ಅರ್ಜಿ ಆಹ್ವಾನ

ಹೊಸದಿಗಂತ ವರದಿ ಬೀದರ್:‌ 

ಬೀದರ್ ಜಿಲ್ಲೆಯ ಕಂದಾಯ ಘಟಕದಲ್ಲಿ ಖಾಲಿ ಇರುವ ಗ್ರಾಮ ಲೆಕ್ಕಿಗರ ಹುದ್ದೆಗಳ ಪೈಕಿ ಸ್ಥಳೀಯ (ಎಚ್.ಕೆ.) ವೃಂದದಲ್ಲಿ (46) ಹುದ್ದೆಗಳು ಮತ್ತು ಸ್ಥಳಿಯೇತರ (ನಾನ್ ಎಚ್.ಕೆ.) ವೃಂದದಲ್ಲಿ 11 ಹುದ್ದೆಗಳು ಸೇರಿ ಒಟ್ಟು 57 ಹುದ್ದೆಗಳ ಭರ್ತಿಗೆ ಆಹ್ವಾನ ಮಾಡಲಾಗಿದೆ. ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಅನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ ಎಂದು ಬೀದರ್ ಜಿಲ್ಲಾಧಿಕಾರಿ ಹಾಗೂ ಗ್ರಾಮ ಲೆಕ್ಕಿಗರ ನೇರ ನೇಮಕಾತಿ ಪ್ರಾಧಿಕಾರದ ಅಧ್ಯಕ್ಷರಾದ ಗೋವಿಂದ್ ರೆಡ್ಡಿ ತಿಳಿಸಿದ್ದಾರೆ.

ಅರ್ಹ ಅಭ್ಯರ್ಥಿಗಳು ಬೀದರ್ ಜಿಲ್ಲಾ ಕಂದಾಯ ಘಟಕದ ಅಧಿಕೃತ ವೆಬ್‍ಸೈಟ್ ಮೂಲಕ ಮುಖಾಂತರ ಅರ್ಜಿ ಸಲ್ಲಿಸಬಹುದು. ಆನ್‍ಲೈನ್ ಮೂಲಕ ದಿನಾಂಕ 11-04-2022 ರಿಂದ 16-05-2022ರೊಳಗೆ ಅರ್ಜಿ ಸಲ್ಲಿಸಬಹುದು.

ಗ್ರಂಥಾಲಯ-ಕಂ-ಮಾಹಿತಿ ಸಹಾಯಕ ಹುದ್ದೆಗಳಿಗೆ ಅರ್ಜಿ ಆಹ್ವಾನ

ಬೀದರ್ ಜಿಲ್ಲಾ ಕೇಂದ್ರ ಗ್ರಂಥಾಲಯದಲ್ಲಿ ಖಾಲಿ ಇರುವ ಗ್ರಾಮ ಪಂಚಾಯತ್ ಗ್ರಂಥಾಲಯ ಹಾಗೂ ಮಾಹಿತಿ ಕೇಂದ್ರಗಳ ಗ್ರಂಥಾಲಯ-ಕಂ-ಮಾಹಿತಿ ಸಹಾಯಕ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಅಭ್ಯರ್ಥಿಗಳು ಮುಖ್ಯ ಗ್ರಂಥಾಲಯಾಧಿಕಾರಿ, ಜಿಲ್ಲಾ ಕೇಂದ್ರ ಗ್ರಂಥಾಲಯ, ಜನವಾಡ ರಸ್ತೆ, ಅರ್ಜಿ ಪಡೆದು ಭರ್ತಿ ಮಾಡಿ ದಿನಾಂಕ: 12-05-2022, ಸಂಜೆ 5.30 ರೊಳಗಾಗಿ ಸಂಬಂಧಪಟ್ಟ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳ ಕಚೇರಿಗೆ ಅಥವಾ ಜಿಲ್ಲಾ ಕೇಂದ್ರ ಗ್ರಂಥಾಲಯಕ್ಕೆ ನೇರವಾಗಿ ಇಲ್ಲವೇ ಅಂಚೆ ಮೂಲಕ ಸಲ್ಲಿಸಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ: ದೂರವಾಣಿ ಸಂಖ್ಯೆ: 08482-226401ಗೆ ಸಂಪರ್ಕಿಸಬಹುದಾಗಿದೆ.

 

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss