Monday, July 4, 2022

Latest Posts

ಬೀದರ್| ವಿಧಾನ ಪರಿಷತ್ ಚುನಾವಣೆ; ಬಿಜೆಪಿ ಅಭ್ಯರ್ಥಿ ಗೆಲುವು ನಿಶ್ಚಿತ: ಖೂಬಾ ವಿಶ್ವಾಸ

ಹೊಸ ದಿಗಂತ ವರದಿ, ಬೀದರ್:

ಕೇಂದ್ರ ಹಾಗೂ ರಾಜ್ಯದಲ್ಲಿ ಬಿಜೆಪಿ ಜನಪರ ಆಡಳಿತ ನೀಡುತ್ತಿದೆ. ವಿಧಾನ ಪರಿಷತ್ ಚುನಾವಣೆಯಲ್ಲಿ ನಮ್ಮ ಅಭ್ಯರ್ಥಿ ಗೆಲುವು ಪಕ್ಕಾ ಎಂದು ಕೇಂದ್ರದ ನವೀಕರಿಸಬಹುದಾದ ಇಂಧನ ಮೂಲ, ರಾಸಾಯನಿಕ ಮತ್ತು ರಸಗೊಬ್ಬರ ಖಾತೆ ರಾಜ್ಯ ಸಚಿವ ಭಗವಂತ ಖೂಬಾ ವಿಶ್ವಾಸವ್ಯಕ್ತಪಡಿಸಿದರು.
ತಾಲೂಕಿನ ಜನವಾಡದಲ್ಲಿ ಗುರುವಾರ ಚುನಾವಣೆ ನಿಮಿತ್ತ ಆಯೋಜಿಸಿದ ಪ್ರಚಾರ ಸಭೆಯಲ್ಲಿ ಮಾತನಾಡಿ, ನಮ್ಮ ಅಭ್ಯರ್ಥಿ ಪ್ರಕಾಶ ಖಂಡ್ರೆ ಹಿರಿಯರು ಹಾಗೂ ಅನುಭವಿಗಳು. ಎರಡು ಬಾರಿ ಶಾಸಕರಾಗಿ ಜನಪರ ಕೆಲಸಗಳು ಮಾಡಿದ್ದಾರೆ. ಖಂಡ್ರೆ ಅವರಿಗೆ ಎಲ್ಲ ಸದಸ್ಯರು ಬೆಂಬಲಿಸುವ ಮೂಲಕ ಭಾರಿ ಅಂತರದಿಂದ ಗೆಲ್ಲಿಸಬೇಕು ಎಂದು ಮನವಿ ಮಾಡಿದರು.
ಜಿಲ್ಲಾ ಉಸ್ತುವಾರಿ ಸಚಿವ ಪ್ರಭು ಚವ್ಹಾಣ್ ಮಾತನಾಡಿ, ಜಿಲ್ಲೆಯ ಎಲ್ಲೆಡೆ ಉತ್ತಮ ವಾತಾವರಣ ಇದೆ. ಈಗಾಗಲೇ ಒಂದು ಸುತ್ತಿನ ಪ್ರಚಾರ ಮುಗಿಸಿ, ಎರಡನೇ ಹಂತದ ಮತಯಾಚನೆ ಆರಂಭಿಸಲಾಗಿದೆ. ಎಲ್ಲ ಮುಖಂಡರು, ಕಾರ್ಯಕರ್ತರು ಒಗ್ಗಟ್ಟಿನಿಂದ ಕೆಲಸ ಮಾಡಿ ಕಮಲ ಅರಳಿಸುವುದು ನಮ್ಮ ಧ್ಯೇಯ ಎಂದು ಹೇಳಿದರು.
ರಾಜ್ಯ ಬಿಜೆಪಿ ಕಾರ್ಯಕಾರಿಣಿ ಸದಸ್ಯ ಸೂರ್ಯಕಾಂತ ನಾಗಮಾರಪಳ್ಳಿ ಮಾತನಾಡಿ
ರಾಜ್ಯದ ಜನಸಂಖ್ಯೆಯ ಶೇ.61 ರಷ್ಟು ಜನ ವಾಸಿಸುತ್ತಿರುವುದು ಹಳ್ಳಿಗಳಲ್ಲಿ,ಹಳ್ಳಿಗಳ ಅಭಿರುದ್ದಿ ಆಗದ ಹೊರತು ದೇಶದ ಅಭಿವೃದ್ಧಿ ಸಾಧ್ಯವಿಲ್ಲ ಎನ್ನುವದು ವಾಸ್ತವ. ಈ ಹಿನ್ನೆಲೆಯಲ್ಲಿಯೇ ದೇಶದ ನೆಚ್ಚಿನ ಪ್ರಧಾನಿಯವರಾದ ನರೇಂದ್ರ ಮೋದಿಜಿ ಅವರು ಗ್ರಾಮೀಣಾಭಿವೃದ್ಧಿಗೆ ದೊಡ್ಡ ಪ್ರಮಾಣದಲ್ಲಿ ನೋಡುತ್ತಿದ್ದಾರೆ.
ಕರ್ನಾಟಕ ಗ್ರಾಮೀಣ ಮೂಲಭೂತ ಸೌಕರ್ಯ ಅಭಿವೃದ್ಧಿ ನಿಗಮ, 14 ನೇ ಹಣಕಾಸು ಆಯೋಗ ಅನುದಾನ ಹೀಗೆ ಬೇರೆ ಬೇರೆ ಯೋಜನೆಗಳ ಮೂಲಕ ಗ್ರಾಮೀಣ ವಿಕಾಸಕ್ಕಾಗಿ ಬಿಜೆಪಿ ಸರ್ಕಾರ ಶ್ರಮಿಸುತ್ತಿದೆ. ಪಂಚಾಯತಿಗಳನ್ನು ಬಲಪಡಿಸುಲ ಶ್ರಮಿಸುತ್ತಿರುವ ಬಿಜೆಪಿಯನ್ನು ಗ್ರಾಮ ಪಂಚಾಯತ್ ಸದ್ಯಸರು ಬೆಂಬಲಿಸುವ ವಿಶ್ವಾಸ ಇದೆ.
ಬೀದರ್ ವಿಧಾನಸಭೆ ಕ್ಷೇತ್ರದ ವ್ಯಾಪ್ತಿಯಲ್ಲಿ ಅತ್ಯಧಿಕ ಮತಗಳನ್ನು ಪ್ರಕಾಶ ಖಂಡ್ರೆ ಅವರಿಗೆ ಹಾಕಿಸುವ ನಿಟ್ಟಿನಲ್ಲಿ ಪ್ರಯತ್ನಿಸಲಾಗುವುದು ಎಂದು ಹೇಳಿದರು.
ಬೀದರ್ ಗ್ರಾಮೀಣ ಮಂಡಲ ಅಧ್ಯಕ್ಷ ರಾಜೇಂದ್ರ ಪೂಜಾರಿ ಮಾತನಾಡಿ, ಬೀದರ್ ಮಂಡಲ ವ್ಯಾಪ್ತಿಯ ಎಲ್ಲ ಗ್ರಾಪಂಗಳಲ್ಲಿ ಪಕ್ಷದ ಬೆಂಬಲಿತ ಸದಸ್ಯರು ಹೆಚ್ಚಿದ್ದಾರೆ. ಅಭ್ಯರ್ಥಿ ಪ್ರಕಾಶ ಖಂಡ್ರೆ ಅವರಿಗೆ ಅಧಿಕ ಮತಗಳು ಕೊಡಿಸುವ ಮೂಲಕ ಗೆಲ್ಲಿಸಲಾಗುವುದು ಎಂದರು.
ವಿಧಾನ ಪರಿಷತ್‍ನ ಪಕ್ಷದ ಅಭ್ಯರ್ಥಿ ಪ್ರಕಾಶ ಖಂಡ್ರೆ, ಬಿಜೆಪಿ ಜಿಲ್ಲಾಧ್ಯಕ್ಷ ಶಿವಾನಂದ ಮಂಠಾಳಕರ್, ವಿಧಾನ ಪರಿಷತ್ ಸದಸ್ಯ ರಘುನಾಥರಾವ ಮಲ್ಕಾಪುರೆ, ಬೀದರ್ ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಬಾಬು ವಾಲಿ, ರಾಜ್ಯ ಹಜ್ ಕಮಿಟಿ ಅಧ್ಯಕ್ಷ
ರೌಫೆದ್ದಿನ್ ಕಚೇರಿವಾಲಾ, ಪ್ರಮುಖರಾದ ಕುಶಾಲ ಪಾಟೀಲ್ ಗಾದಗಿ, ಅಶೋಕ ಹೊಕ್ರಾಣೆ, ರಾಜಾರಾಮ ಚಿಟ್ಟಾ, ಶಶಿ ಹೊಸಳ್ಳಿ, ವಿಜಯಕುಮಾರ ಪಾಟೀಲ್ ಗಾದಗಿ, ಅರಹಂತ ಸಾವಳೆ, ಮಹೇಶ್ವರ ಸ್ವಾಮಿ, ಹಣಮಂತ ಬುಳ್ಳಾ, ವಿಜಯಕುಮಾರ ಆನಂದೆ ಇತರರಿದ್ದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss