ಬೀದರ್:‌ ಜೂ.21ಕ್ಕೆ ಯೋಗ ದಿನಾಚರಣೆ, ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪುರಸ್ಕಾರ

ಹೊಸದಿಗಂತ ವರದಿ, ಬೀದರ್:
ಪ್ರೊ. ಬಿ.ಜಿ. ಮೂಲಿಮನಿ ಫೌಂಡೇಷನ್ ಹಾಗೂ ಜನಸೇವಾ ಶಿಶು ಮಂದಿರ, ಪ್ರಾಥಮಿಕ ಹಾಗೂ ಪ್ರೌಢಶಾಲೆ ವತಿಯಿಂದ ಇಲ್ಲಿಯ ಪ್ರತಾಪನಗರದ ಜನಸೇವಾ ಶಾಲೆಯಲ್ಲಿ ಜೂ. 21 ರಂದು ಬೆಳಿಗ್ಗೆ 10.30ಕ್ಕೆ ಅಂತರರಾಷ್ಟ್ರೀಯ ಯೋಗ ದಿನಾಚರಣೆ ಹಾಗೂ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಸಮಾರಂಭ ಹಮ್ಮಿಕೊಳ್ಳಲಾಗಿದೆ.
ಗುಲಬರ್ಗಾ ವಿಶ್ವವಿದ್ಯಾಲಯದ ವಿಶ್ರಾಂತ ಉಪ ಕುಲಪತಿ ಪ್ರೊ. ಬಿ.ಜಿ. ಮೂಲಿಮನಿ ಉದ್ಘಾಟಿಸುವರು. ಶಾಹೀನ್ ಶಿಕ್ಷಣ ಸಂಸ್ಥೆಗಳ ಸಮೂಹದ ಅಧ್ಯಕ್ಷ ಅಬ್ದುಲ್ ಖದೀರ್, ಜನಸೇವಾ ಪ್ರತಿಷ್ಠಾನದ ಅಧ್ಯಕ್ಷ ಬಸವರಾಜ ಸ್ವಾಮಿ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳುವರು. ಪ್ರೊ. ಬಿ.ಜಿ. ಮೂಲಿಮನಿ ಫೌಂಡೇಷನ್ ಅಧ್ಯಕ್ಷ ಶಿವಲಿಂಗಪ್ಪ ಜಲಾದೆ ಅಧ್ಯಕ್ಷತೆ ವಹಿಸುವರು ಎಂದು ಫೌಂಡೇಷನ್ ಕಾರ್ಯದರ್ಶಿ ರೇವಣಸಿದ್ದಪ್ಪ ಜಲಾದೆ ತಿಳಿಸಿದ್ದಾರೆ.
ಸಮಾರಂಭದಲ್ಲಿ ಪ್ರಸಕ್ತ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಉತ್ತಮ ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಶಾಲು ಹೊದಿಸಿ, ಸನ್ಮಾನಿಸಿ ಪ್ರೋತ್ಸಾಹಿಸಲಾಗುವುದು ಎಂದು ಹೇಳಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!