Monday, October 2, 2023

Latest Posts

ಬೈಡನ್- ಮೋದಿ ಭೇಟಿ: ಜಾಗತಿಕ ಒಳಿತನ್ನು ಹೆಚ್ಚಿಸುವಲ್ಲಿ ಉಭಯ ರಾಷ್ಟ್ರಗಳ ನಡುವಿನ ಸ್ನೇಹ ಮಹತ್ವದ್ದು ಎಂದ ಪ್ರಧಾನಿ!

ಹೊಸದಿಗಂತ ಡಿಜಿಟಲ್‌ ಡೆಸ್ಕ್:

ಜೋ ಬೈಡನ್ ಭೇಟಿ ಜಾಗತಿಕ ಒಳಿತಿನಲ್ಲಿ ಭಾರತ ಹಾಗೂ ಅಮೆರಿಕ ಸ್ನೇಹದ ಪಾತ್ರ ಮಹತ್ವದ್ದು ಎಂದು ಪ್ರಧಾನಿ ನರೇಂದ್ರ ಮೋದಿ (Narendra Modi) ಶುಕ್ರವಾರ ಹೇಳಿದ್ದಾರೆ.

ಜಿ20 ಶೃಂಗಸಭೆಯಲ್ಲಿ ಭಾಗವಹಿಸಲು ಬೈಡನ್ ಅವರು ದೆಹಲಿಗೆ ಆಗಮಿಸಿದ್ದಾರೆ. ದೆಹಲಿ ತಲುಪಿದ ನಂತರ ಬೈಡನ್ ಅವರು ನೇರವಾಗಿ ಪ್ರಧಾನಿ ಮೋದಿ ನಿವಾಸಕ್ಕೆ ತಲುಪಿ ದ್ವಿಪಕ್ಷೀಯ ಮಾತುಕತೆ ನಡೆಸಿದರು.

ಅಮೆರಿಕದ ಅಧ್ಯಕ್ಷ ಜೋ ಬೈಡನ್ (Joe Biden) ಅವರ ಜತೆ ದ್ವಿಪಕ್ಷೀಯ ಮಾತುಕತೆ ನಡೆಸಿದ ಬಳಿಕ ಸಾಮಾಜಿಕ ಮಾಧ್ಯಮ ಎಕ್ಸ್​ನಲ್ಲಿ ಪೋಸ್ಟ್ ಮಾಡಿರುವ ಅವರು, ‘ಜೋ ಬೈಡನ್ ಅವರನ್ನು 7 ಲೋಕ ಕಲ್ಯಾಣ್ ಮಾರ್ಗಕ್ಕೆ ಸ್ವಾಗತಿಸಿದ್ದಕ್ಕೆ ಸಂತೋಷವಾಗಿದೆ. ನಮ್ಮ ಸಭೆಯು ಬಹಳ ಫಲಪ್ರದವಾಗಿತ್ತು. ಭಾರತ ಮತ್ತು ಅಮೆರಿಕ ನಡುವಿನ ಆರ್ಥಿಕ ಮತ್ತು ಜನರಿಂದ ಜನರ ಸಂಪರ್ಕವನ್ನು ಮತ್ತಷ್ಟು ಹೆಚ್ಚಿಸುವ ಹಲವಾರು ವಿಷಯಗಳನ್ನು ನಾವು ಚರ್ಚಿಸಲು ಸಾಧ್ಯವಾಯಿತು. ಉಭಯ ರಾಷ್ಟ್ರಗಳ ನಡುವಿನ ಸ್ನೇಹವು ಜಾಗತಿಕ ಒಳಿತನ್ನು ಹೆಚ್ಚಿಸುವಲ್ಲಿ ಮಹತ್ತರವಾದ ಪಾತ್ರವನ್ನು ವಹಿಸುತ್ತದೆ ಎಂದು ಮೋದಿ ಉಲ್ಲೇಖಿಸಿದ್ದಾರೆ.

ದ್ವಿಪಕ್ಷೀಯ ಮಾತುಕತೆ ಮುಗಿದ ನಂತರ, ಅಮೆರಿಕದ ಅಧ್ಯಕ್ಷರು ಈಗ ಐಟಿಸಿ ಮೌರ್ಯ ಹೋಟೆಲ್‌ಗೆ ತಲುಪಿದ್ದಾರೆ. ಅಲ್ಲಿ ಅವರು ರಾತ್ರಿ ವಿಶ್ರಾಂತಿ ಪಡೆಯಲಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!