Tuesday, October 3, 2023

Latest Posts

ಸೆ. 7 ರಂದು ಭಾರತಕ್ಕೆ ಅಮೆರಿಕದ ಅಧ್ಯಕ್ಷರ ಭೇಟಿ: ಶ್ವೇತ ಭವನ

ಹೊಸದಿಗಂತ ಡಿಜಿಟಲ್‌ ಡೆಸ್ಕ್:

ಸೆಪ್ಟೆಂಬರ್‌ನಲ್ಲಿ ನವದೆಹಲಿಯಲ್ಲಿ ನಡೆಯಲಿರುವ ಜಿ 20 ನಾಯಕರ ಶೃಂಗಸಭೆಯಲ್ಲಿ ಭಾಗವಹಿಸಲು ಯುಎಸ್ ಅಧ್ಯಕ್ಷ ಜೋ ಬಿಡೆನ್ ಭಾರತಕ್ಕೆ ಸೆಪ್ಟೆಂಬರ್‌ 7ರಂದು ಭೇಟಿ ನೀಡಲಿದ್ದಾರೆ ಎಂದು ಶ್ವೇತಭವನವು ಮಂಗಳವಾರ ತಿಳಿಸಿದೆ.

ಭಾರತಕ್ಕೆ ನಾಲ್ಕು ದಿನಗಳ ಪ್ರವಾಸ ಕೈಗೊಳ್ಳಲಿರುವ ಬೈಡನ್ ಅವರು ಜಿ-20 ಪಾಲುದಾರ ರಾಷ್ಟ್ರಗಳ ನಾಯಕರೊಂದಿಗೆ ಜಾಗತಿಕ ಸಮಸ್ಯೆಗಳನ್ನು ನಿಭಾಯಿಸುವ ಕುರಿತು ಜಂಟಿ ಪ್ರಯತ್ನಗಳು, ಹವಾಮಾನ ಬದಲಾವಣೆ, ಶುದ್ಧ ಇಂಧನ ಪರಿವರ್ತನೆ, ಉಕ್ರೇನ್ ಸಂಘರ್ಷದಿಂದ ಉಂಟಾದ ಆರ್ಥಿಕ ಮತ್ತು ಸಾಮಾಜಿಕ ಪರಿಣಾಮಗಳನ್ನು ತಗ್ಗಿಸುವಿಕೆಯ ಕುರಿತು ಚರ್ಚೆ ನಡೆಸಲಿದ್ದಾರೆ. ಅಲ್ಲದೆ ಜಾಗತಿಕ ಸವಾಲುಗಳನ್ನು ಎದುರಿಸುವುದು ಸೇರಿದಂತೆ ಬಡತನದ ವಿರುದ್ಧ ಹೋರಾಡಲು ವಿಶ್ವಬ್ಯಾಂಕ್ ಸೇರಿದಂತೆ ಬಹುಪಕ್ಷೀಯ ಅಭಿವೃದ್ಧಿ ಬ್ಯಾಂಕ್‌ಗಳ ಸಾಮರ್ಥ್ಯವನ್ನು ಹೆಚ್ಚಿಸುವ ಬಗ್ಗೆಯೂ ಚರ್ಚಿಸಲಿದ್ದಾರೆ ಎಂದು ಶ್ವೇತಭವನ ಹೇಳಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!