ರಷ್ಯಾಗೆ ಮತ್ತೊಮ್ಮೆ ವಾರ್ನಿಂಗ್: ಅಣ್ವಸ್ತ್ರ ಬಳಸದಂತೆ ಬಿಡೆನ್‌ ಎಚ್ಚರಿಕೆ 

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ರಷ್ಯಾ ಮತ್ತು ಉಕ್ರೇನ್ ನಡುವಿನ ಯುದ್ಧ ಮುಂದುವರೆದಿದೆ.  ದಾಳಿಯನ್ನು ಎದುರಿಸುವ ಮೂಲಕ ಉಕ್ರೇನ್ ರಷ್ಯಾಗೆ ತಕ್ಕ ಉತ್ತರ ನೀಡುತ್ತಿದೆ. ಉಕ್ರೇನ್‌ ಮಣಿಸಲು ರಷ್ಯಾ ಪರಮಾಣು ಅಸ್ತ್ರ ಪ್ರಯೋಗಿಸಲು ಸಿದ್ಧತೆ ನಡೆಸಿದೆ ಎಂಬ ಸುದ್ದಿಗಳೂ ಹೊರಬರುತ್ತಿವೆ. ಇದೀಗ ಈ ವಿಚಾರಕ್ಕೆ ಪ್ರತಿಕ್ರಿಯಿಸಿರುವ ಅಮೆರಿಕ ಅಧ್ಯಕ್ಷ ಜೋ ಬಿಡನ್ ರಷ್ಯಾಕ್ಕೆ ಎಚ್ಚರಿಕೆ ನೀಡಿದ್ದಾರೆ.

ʻಪರಮಾಣು ಶಸ್ತ್ರಾಸ್ತ್ರಗಳನ್ನು ಬಳಸಿದರೆ, ಅದು ರಷ್ಯಾ ಮಾಡುವ ದೊಡ್ಡ ತಪ್ಪುʼ ಎಂದು ಬಿಡೆನ್ ಬಣ್ಣಿಸಿದ್ದಾರೆ. ಪರಮಾಣು ಶಸ್ತ್ರಾಸ್ತ್ರಗಳನ್ನು ನಿಯೋಜಿಸಲು ರಷ್ಯಾ ತಯಾರಿ ನಡೆಸುತ್ತಿದೆಯೇ? ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಬಿಡೆನ್, ಈ ಬಗ್ಗೆ ಪ್ರಸ್ತುತ ಯಾವುದೇ ದೃಢೀಕರಣವನ್ನು ನೀಡಲು ಸಾಧ್ಯವಿಲ್ಲ. ಅದಕ್ಕೂ ಮೀರಿ ರಷ್ಯಾ ಪರಮಾಣು ಶಸ್ತ್ರಾಸ್ತ್ರಗಳನ್ನು ಬಳಸಿದರೆ, ತೀವ್ರ ಪರಿಣಾಮ ಎದುರಿಸಬೇಕಾಗುತ್ತದೆ ಎಂದಿದ್ದಾರೆ.  ಇದಕ್ಕೆ ಪ್ರತಿಕ್ರಿಯಿಸಿದ ಶ್ವೇತಭವನದ ಪತ್ರಿಕಾ ಕಾರ್ಯದರ್ಶಿ ಕರಿನ್ ಜೀನ್-ಪಿಯರ್, ಬಿಡೆನ್ ಈ ವಿಷಯದ ಬಗ್ಗೆ ಸಂಪೂರ್ಣವಾಗಿ ಸ್ಪಷ್ಟವಾಗಿದ್ದಾರೆ ಎಂಬುದನ್ನು ತಿಳಿಸಿದರು.

ರಷ್ಯಾ-ಉಕ್ರೇನ್ ಸಮಸ್ಯೆಯನ್ನು ನಾವು ಸೂಕ್ಷ್ಮವಾಗಿ ಪರಿಶೀಲಿಸುತ್ತಿದ್ದೇವೆ. ರಷ್ಯಾ ಪರಮಾಣು ಶಸ್ತ್ರಾಸ್ತ್ರಗಳೊಂದಿಗೆ ಮಿಲಿಟರಿ ವ್ಯಾಯಾಮ ನಡೆಸಲು ಯೋಜಿಸುತ್ತಿದೆ ಎಂದು ಯುಎಸ್ ಸರ್ಕಾರ ಇತ್ತೀಚೆಗೆ ಹೇಳಿತ್ತು. ಇದಕ್ಕೆ ಪೂರಕವಾಗಿ ರಷ್ಯಾ ರಹಸ್ಯವಾಗಿ ಹಲವು ಚಟುವಟಿಕೆಗಳನ್ನು ಮಾಡುತ್ತಿದೆ ಎಂದು ಉಕ್ರೇನ್ ಸಹ ಹೇಳಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!