ಹೊಸದಿಗಂತ ಡಿಜಿಟಲ್ ಡೆಸ್ಕ್:
ಕೊಲ್ಕತ್ತಾದಿಂದ ಬೆಂಗಳೂರಿಗೆ ಬಂದಿದ್ದ ಇಂಡಿಗೋ ವಿಮಾನದಲ್ಲಿ ವ್ಯಕ್ತಿಯೊಬ್ಬ ಬೀಡಿ ಸೇದಿದ್ದು, ಆತನನ್ನು ಬಂಧಿಸಲಾಗಿದೆ. ಏರ್‌ಕ್ರಾಫ್ಟ್ ಆಕ್ಟ್ ಅಡಿಯಲ್ಲಿ ಜಿ. ಕರುಣಾಕರನ್ ಎಂಬಾತನನ್ನು ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಬಂಧಿಸಲಾಗಿದೆ.
ನೇತಾಜಿ ಸುಭಾಷ್ ಚಂದ್ರ ಬೋಸ್ ಏರ್‌ಪೋರ್ಟ್‌ನಿಂದ ಟೇಕಾಫ್ ಆಗಿದ್ದ ವಿಮಾನದಲ್ಲಿ ಕುಳಿತಿದ್ದರು. ಕೆಲ ಸಮಯದ ನಂತರ ಅವರು ಶೌಚಾಲಯಕ್ಕೆ ಹೋಗಿದ್ದಾರೆ. ಅಲ್ಲಿಂದ ಸುಟ್ಟ ವಾಸನೆ ಬಂದಿದೆ.
ಉಳಿದ ಪ್ರಯಾಣಿಕರು ವಾಸನೆ ಬಗ್ಗೆ ಮಾಹಿತಿ ನೀಡಿದ್ದು, ಬಾಗಿಲು ತಟ್ಟಿದ್ದಾರೆ. ಕರುಣಾಕರನ್ ಬಾಗಿಲು ತೆಗೆದಿದ್ದು, ಆತನ ಕೈಯಲ್ಲಿ ಬೆಂಕಿ ಪೊಟ್ಟಣ ಸಿಕ್ಕಿದೆ. ಬೀಡಿಯನ್ನು ಫ್ಲಶ್ ಮಾಡುವ ಪ್ರಯತ್ನವನ್ನೂ ಮಾಡಿದ್ದಾರೆ. ವಿಮಾನದಿಂದ ಇಳಿದ ನಂತರ ಕರುಣಾಕರನ್‌ನ್ನು ಅರೆಸ್ಟ್ ಮಾಡಲಾಗಿದೆ.