October 9, 2026
Friday, October 9, 2026
spot_img

ಕರ್ನಾಟಕಕ್ಕೆ ಬರದ ‘ಬಿಗ್ ಅಲರ್ಟ್’; ನೀರು, ಕರೆಂಟ್‌ಗೂ ಕಾಡಲಿದೆ ಕೊರತೆ: ಸಿಎಂ ಡಿ.ಕೆ. ಶಿವಕುಮಾರ್

ಹೊಸದಿಗಂತ ಡಿಜಿಟಲ್ ಡೆಸ್ಕ್:

ಈ ಬಾರಿ ರಾಜ್ಯದಲ್ಲಿ ಮಳೆ ಕೊರತೆಯಿಂದ ಬರ ಪರಿಸ್ಥಿತಿ ಮತ್ತಷ್ಟು ಗಂಭೀರವಾಗುತ್ತಿದ್ದು, ಮುಂದಿನ ದಿನಗಳಲ್ಲಿ ನೀರು ಮತ್ತು ವಿದ್ಯುತ್ ಕೊರತೆ ಉಂಟಾಗಬಹುದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಎಚ್ಚರಿಕೆ ಕೊಟ್ಟಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಡಿಕೆಶಿ, ಮಳೆ ಕಡಿಮೆಯಾಗಿದೆ, ಬೆಳೆ ನಷ್ಟವಾಗಿದ್ದು, ಅಂತರ್ಜಲ ಮಟ್ಟವೂ ಕುಸಿಯುತ್ತಿರೋದು ಆತಂಕಕ್ಕೆ ಕಾರಣವಾಗಿದೆ. ಸದ್ಯ ರಾಜ್ಯದ 239 ತಾಲೂಕುಗಳ ಪೈಕಿ 200ಕ್ಕೂ ಹೆಚ್ಚು ತಾಲೂಕುಗಳು ಬರದ ಪರಿಸ್ಥಿತಿ ಎದುರಿಸುತ್ತಿವೆ. ಈಗಾಗಲೇ ರಾಜ್ಯದ 101 ತಾಲೂಕುಗಳನ್ನು ಬರಪೀಡಿತ ಎಂದು ಘೋಷಿಸಲಾಗಿದೆ ಎಂದರು.

ಇದನ್ನೂ ಓದಿ:

ಮಳೆಯ ಕೊರತೆಯಿಂದ ವಿದ್ಯುತ್ ಬಳಕೆ ಹೆಚ್ಚುತ್ತಿರೋದು ಮತ್ತೊಂದು ಸವಾಲಾಗಿದೆ. ರಾತ್ರಿ ಪೂರ್ತಿ ಕರೆಂಟ್ ಬೇಡಿಕೆ ಸಿಕ್ಕಾಪಟ್ಟೆ ಹೆಚ್ಚಾಗಿರೋದ್ರಿಂದ ಬೇಡಿಕೆ ಪೂರೈಸೋದಕ್ಕೆ ಪ್ರತಿ ಯೂನಿಟ್‌ಗೆ 11–12 ದರದಲ್ಲಿ ವಿದ್ಯುತ್ ಖರೀದಿಸುವ ಅನಿವಾರ್ಯತೆ ಈಗ ಎದುರಾಗಿದೆ ಎಂದರು.

ವಿದ್ಯುತ್ ಪೂರೈಕೆಯ ಸಾಮರ್ಥ್ಯ ಹೆಚ್ಚಿಸೋಕೆ ಏನೆಲ್ಲಾ ಅಗತ್ಯ ಕ್ರಮ ಕೈಗೊಳ್ಳಬಹುದು ಅನ್ನೋ ವಿಚಾರವಾಗಿ ಇಂಧನ ಸಚಿವ ಕೆ.ಜೆ. ಜಾರ್ಜ್ ಹಾಗೂ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಚರ್ಚಿಸಿದ್ದೇವೆ ಎಂದು ಹೇಳಿದರು.

Must Read