August 12, 2026
Wednesday, August 12, 2026
spot_img

ಬಿಗ್‌ ಅನೌನ್ಸ್‌ಮೆಂಟ್‌ | ರಾಜ್ಯದಲ್ಲಿ ಒಂದು ವರ್ಷ ಗುಟ್ಕಾ, ಪಾನ್‌ ಮಸಾಲಾ ನಿಷೇಧ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಒಂದು ವರ್ಷದ ಅವಧಿಗೆ ರಾಜ್ಯದಲ್ಲಿ ತಂಬಾಕು ಮತ್ತು ನಿಕೋಟಿನ್‌ ಹೊಂದಿರುವ ಗುಟ್ಕಾ ಹಾಗೂ ಪಾನ್‌ ಮಸಾಲಾಗಳ ಉತ್ಪಾದನೆ, ಶೇಖರಣೆ, ವಿತರಣೆಮ ಸಾಗಣೆ ಹಾಗೂ ಮಾರಾಟವನ್ನು ನಿಷೇಧಿಸಲಾಗಿದೆ. ಸಾರ್ವಜನಿಕರ ಆರೋಗ್ಯ ಹಾಗೂ ಸುರಕ್ಷತೆಯ ದೃಷ್ಟಿಯಿಂದ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಅಧಿಸೂಚನೆ ಹೊರಡಿಸಿದ ದಿನದಿಂದಲೇ ಈ ನಿಷೇಧ ಜಾರಿಗೆ ಬಂದಿದೆ.

ಆಹಾರ ಭದ್ರತೆ ಮತ್ತು ಗುಣಮಟ್ಟ ಕಾಯ್ದೆ-2006 ರ ಸೆಕ್ಷನ್ 30(2)(a) ಹಾಗೂ ಆಹಾರ ಭದ್ರತೆ ಮತ್ತು ಗುಣಮಟ್ಟ (ಮಾರಾಟ ನಿಷೇಧ ಮತ್ತು ನಿರ್ಬಂಧಗಳು) ನಿಯಮಾವಳಿಗಳು-2011ರ ನಿಯಮ 2.3.4 ರ ಅಡಿಯಲ್ಲಿ ರಾಜ್ಯ ಆಹಾರ ಸುರಕ್ಷತಾ ಆಯುಕ್ತರು ಈ ಅಧಿಕೃತ ಅಧಿಸೂಚನೆಯನ್ನು ಹೊರಡಿಸಿದ್ದಾರೆ.

ತಂಬಾಕು ಅಥವಾ ನಿಕೋಟಿನ್ ಅಂಶವನ್ನು ಪ್ರತ್ಯೇಕವಾಗಿ ಪ್ಯಾಕ್ ಮಾಡಿ, ನಂತರ ಗ್ರಾಹಕರು ಸುಲಭವಾಗಿ ಮಿಶ್ರಣ ಮಾಡಿ ಬಳಸುವಂತೆ ಮಾರಾಟ ಮಾಡುವ ಯಾವುದೇ ಉತ್ಪನ್ನಗಳಿಗೂ ಈ ನಿಷೇಧ ಅನ್ವಯವಾಗಲಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !