ಹೊಸದಿಗಂತ ಡಿಜಿಟಲ್ ಡೆಸ್ಕ್:
ನಿನ್ನೆಯಷ್ಟೇ ಹಿರಿಯ ನಟ ಅಮಿತಾಭ್ ಬಚ್ಚನ್ ಅನಾರೋಗ್ಯಕ್ಕೆ ಒಳಗಾಗಿ ಆಸ್ಪತ್ರೆಗೆ ದಾಖಲಾಗಿದ್ದರು ಎನ್ನುವ ಸುದ್ದಿ ವೈರಲ್ ಆಗಿತ್ತು. ಈ ಸುದ್ದಿ ಸುಳ್ಳು ಎಂದು ಖುದ್ದು ಅಮಿತಾಭ್ ಬಚ್ಚನ್ ಅವರೇ ಸ್ಪಷ್ಟನೆ ನೀಡಿದ್ದಾರೆ.
ಆಂಜಿಯೋಪ್ಲಾಸ್ಟಿ ಚಿಕಿತ್ಸೆಗಾಗಿ ಅವರನ್ನು ಮುಂಬೈನ ಕೋಕಿಲಾ ಬೆನ್ ಆಸ್ಪತ್ರೆಗೆ ದಾಖಲಿಸಲಾಗಿತ್ತು ಎನ್ನುವ ಮಾಹಿತಿ ಹರಡಿತ್ತು. ಆದರೆ ನಿನ್ನೆ ಥಾಣೆಯ ದಾದಾಜಿ ಕೊಂಡದೇವ್ ಸ್ಟೇಡಿಯಂನಲ್ಲಿ ನಡೆದ ಇಂಡಿಯನ್ ಸ್ಟ್ರೀಟ್ ಲೀಗ್‌ನಲ್ಲಿ ಅಮಿತಾಭ್ ಬಚ್ಚನ್ ಕಾಣಿಸಿಕೊಂಡಿದ್ದು, ಇದು ಸುಳ್ಳು ಸುದ್ದಿ ಆರೋಗ್ಯವಾಗಿದ್ದೇನೆ ಎಂದು ಹೇಳಿದ್ದಾರೆ.