ಹೊಸದಿಗಂತ ಡಿಜಿಟಲ್ ಡೆಸ್ಕ್:
ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಸುಪ್ರೀಂ ಕೋರ್ಟ್ ಸೂಚನೆ ನೀಡಿದ್ದು, ರಾಜ್ಯಾದ್ಯಂತ ಪ್ರತಿಭಟನೆ ನಡೆಯುತ್ತಿದೆ.
ಇದೀಗ ವಿಪಕ್ಷಗಳು ಈ ಬಗ್ಗೆ ಮಾತನಾಡಿದ್ದು, ನಮ್ಮ ಸರ್ಕಾರದ ಲೀಗಲ್ ಟೀಂ ಸೂಕ್ತ ರೀತಿಯಲ್ಲಿ ವಾದ ಮಂಡಿಸದೇ ಇರುವುದರಿಂದ ಇಷ್ಟು ದೊಡ್ಡ ನಷ್ಟವಾಗಿದೆ ಎಂದಿದ್ದಾರೆ.
ನಾಳೆ ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಗುವುದು ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಮೈಸೂರು ಬ್ಯಾಂಕ್ ಸರ್ಕಲ್‌ನಲ್ಲಿ ಪ್ರತಿಭಟನೆ ನಡೆಸಲಾಗುವುದು ನಮ್ಮ ರೈತರಿಗೆ ನ್ಯಾಯ ಸಿಗಬೇಕು ಎಂದು ಹೇಳಿದ್ದಾರೆ.
ಡಿಕೆಶಿ ಮಾತೆತ್ತಿದರೆ ಬ್ರ್ಯಾಂಡ್ ಬೆಂಗಳೂರು ಎಂದು ಹೇಳುತ್ತಾರೆ. ಅದೇ ಬ್ರ್ಯಾಂಡ್ ಬೆಂಗಳೂರಿಗೆ ನೀರು ಇಲ್ಲದ ಪರಿಸ್ಥಿತಿ ಎದುರಾಗುತ್ತದೆ ಎಂದಿದ್ದಾರೆ.