ಹೊಸದಿಗಂತ ಡಿಜಿಟಲ್ ಡೆಸ್ಕ್:
ಕೇದಾರನಾಥಕ್ಕೆ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ಉತ್ತರಾಖಂಡದ ಗೌರಿಕುಂಡ ಬಳಿ ಪತನಗೊಂಡಿದ್ದು, ಪೈಲೆಟ್ ಸೇರಿ ಹೆಲಿಕಾಪ್ಟರ್‌ನಲ್ಲಿದ್ದ 6 ಮಂದಿ ಮೃತಪಟ್ಟಿದ್ದಾರೆ.
ಕೆಟ್ಟ ಹವಾಮಾನದಿಂದಾಗಿ ಅಪಘಾತ ಸಂಭವಿಸಿದೆ ಎನ್ನಲಾಗಿದೆ. ಘಟನೆಯ ನಂತರ, ಎನ್ಡಿಆರ್ಎಫ್ ತಂಡಗಳು ಸ್ಥಳಕ್ಕೆ ತಲುಪಿವೆ. ಹೆಲಿಕಾಪ್ಟರ್‌ನ ಅವಶೇಷಗಳು ಸ್ಥಳದಲ್ಲಿ ಚದುರಿಹೋಗಿವೆ.
ಅಪಘಾತಕ್ಕೀಡಾದ ಹೆಲಿಕಾಪ್ಟರ್ ಆರ್ಯನ್ ಏವಿಯೇಷನ್‌ನದು ಎಂದು ಹೇಳಲಾಗುತ್ತಿದೆ. ಈ ಹೆಲಿಕಾಪ್ಟರ್ ಇಂದು ಬೆಳಿಗ್ಗೆ ಡೆಹ್ರಾಡೂನ್‌ನಿಂದ ಕೇದಾರನಾಥಕ್ಕೆ ಹೋಗುತ್ತಿದ್ದಾಗ ತ್ರಿಜುಗಿನಾರಾಯಣ ಮತ್ತು ಗೌರಿಕುಂಡ್ ನಡುವೆ ನಾಪತ್ತೆಯಾಗಿತ್ತು ಎಂದು ಹೆಚ್ಚುವರಿ ಮಹಾನಿರ್ದೇಶಕ ಡಾ. ವಿ. ಮುರುಗೇಶನ್ ತಿಳಿಸಿದ್ದಾರೆ.
ಬೆಳಿಗ್ಗೆ 5.30 ಕ್ಕೆ ಈ ಘಟನೆ ನಡೆದಿದೆ ಎಂದು ಹೇಳಲಾಗುತ್ತಿದೆ. ಕೆಟ್ಟ ಹವಾಮಾನವೇ ಹೆಲಿಕಾಪ್ಟರ್ ಅಪಘಾತಕ್ಕೆ ಕಾರಣ ಎಂದು ಹೇಳಲಾಗುತ್ತಿದೆ.