ಹೊಸದಿಗಂತ ಡಿಜಿಟಲ್ ಡೆಸ್ಕ್:
ದೀಪಾವಳಿ ಹಬ್ಬದಂದು ದರ್ಶನ್ ಗೆ ಭರ್ಜರಿ ಗಿಫ್ಟ್ ಸಿಕ್ಕಿದ್ದು, 140 ದಿನಗಳ ನಂತರ ದರ್ಶನ್ ಜೈಲಿನಿಂದ ಬಿಡುಗಡೆಯಾಗಿದ್ದಾರೆ. ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಬಂಧಿತರಾಗಿರುವ ನಟ ದರ್ಶನ್‌ಗೆ ಹೈಕೋರ್ಟ್ ಆರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ.
ಬೆನ್ನು ನೋವಿನಿಂದ ಪರಿಹಾರ ಪಡೆಯಲು ಶಸ್ತ್ರ ಚಿಕಿತ್ಸೆಗೆ ಅವಕಾಶ ಕಲ್ಪಿಸಿಕೊಂಡಬೇಕೆಂದು ಕೋರಿ ದರ್ಶನ್ ಸಲ್ಲಿಸಿದ್ದ ಮನವಿಯನ್ನು ಪುರಸ್ಕರಿಸಿದ ನ್ಯಾಯಮೂರ್ತಿ ವಿಶ್ವಜಿತ್ ಶೆಟ್ಟಿ ಅವರಿದ್ದ ಏಕಸದಸ್ಯ ಪೀಠ ಇಂದು ಮಧ್ಯಂತರ ಜಾಮೀನು ಮಂಜೂರು ಮಾಡಿದೆ.
ಹೈಕೋರ್ಟ್‌ನಲ್ಲಿ ದರ್ಶನ್ ಪರ ವಕೀಲ ಸಿ.ವಿ ನಾಗೇಶ್, ದರ್ಶನ್ ನೋವು ಉಲ್ಲೇಖಿಸಿ ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಅವಶ್ಯಕತೆ ಇದೆ. ಇಲ್ಲವಾದಲ್ಲಿ ದರ್ಶನ್ ಒಂದು ಕಾಲಿಗೆ ಆಗಿರುವ ಸಮಸ್ಯೆ ಎರಡೂ ಕಾಲಿಗೆ ಆಗಬಹುದು. ಹೀಗಾಗಿ 3 ತಿಂಗಳು ಮಧ್ಯಂತರ ಜಾಮೀನು ನೀಡಬೇಕೆಂದು ಮನವಿ ಮಾಡಿದ್ದರು. ಮನವಿಯನ್ನು ಪುರಸ್ಕರಿಸಿದ ನ್ಯಾಯಮೂರ್ತಿ ವಿಶ್ವಜಿತ್ ಶೆಟ್ಟಿ ಅವರಿದ್ದ ಏಕಸದಸ್ಯ ಪೀಠ ಮಧ್ಯಂತರ ಜಾಮೀನು ಮಂಜೂರು ಮಾಡಿದೆ.