February 11, 2026
Wednesday, February 11, 2026
spot_img

BIG BREAKING | ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ಪ್ರಯಾಣಿಸುತ್ತಿದ್ದ ವಿಮಾನ ಪತನ!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಹಾಗೂ ಎನ್‌ಸಿಪಿ ಪ್ರಭಾವಿ ನಾಯಕ ಅಜಿತ್ ಪವಾರ್ ಅವರು ಪ್ರಯಾಣಿಸುತ್ತಿದ್ದ ವಿಮಾನವು ಬುಧವಾರ ಬೆಳಿಗ್ಗೆ ಬಾರಾಮತಿ ವಿಮಾನ ನಿಲ್ದಾಣದಲ್ಲಿ ಲ್ಯಾಂಡಿಂಗ್ ಆಗುವ ವೇಳೆ ತಾಂತ್ರಿಕ ದೋಷದಿಂದ ಪತನಗೊಂಡಿದೆ ಎಂದು ವರದಿಯಾಗಿದೆ.

ಬಾರಾಮತಿ ವಿಮಾನ ನಿಲ್ದಾಣದ ರನ್‌ವೇಯಲ್ಲಿ ವಿಮಾನವು ಇಳಿಯುತ್ತಿದ್ದ ಸಂದರ್ಭದಲ್ಲಿ ಈ ಅವಘಡ ಸಂಭವಿಸಿದೆ. ವಿಮಾನದಲ್ಲಿ ಅಜಿತ್ ಪವಾರ್ ಅವರೊಂದಿಗೆ ಅವರ ಆಪ್ತ ಅಂಗರಕ್ಷಕರು ಸಹ ಇದ್ದರು ಎನ್ನಲಾಗಿದೆ. ಘಟನೆ ನಡೆದ ತಕ್ಷಣ ಸ್ಥಳೀಯರು ಮತ್ತು ಭದ್ರತಾ ಸಿಬ್ಬಂದಿ ರಕ್ಷಣಾ ಕಾರ್ಯಚರಣೆ ನಡೆಸಿದ್ದು, ಅಜಿತ್ ಪವಾರ್ ಅವರನ್ನು ತಕ್ಷಣವೇ ಹತ್ತಿರದ ಆಸ್ಪತ್ರೆಗೆ ಕರೆದೊಯ್ಯಲಾಗಿದೆ.

ಸದ್ಯ ಅವರ ಆರೋಗ್ಯ ಸ್ಥಿತಿಯ ಬಗ್ಗೆ ಹೆಚ್ಚಿನ ಮಾಹಿತಿ ಲಭ್ಯವಾಗಬೇಕಿದೆ. ವಿಮಾನ ನಿಲ್ದಾಣದ ಸುತ್ತಮುತ್ತ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದ್ದು, ತಾಂತ್ರಿಕ ತಂಡವು ಅಪಘಾತಕ್ಕೆ ನಿಖರ ಕಾರಣವೇನು ಎಂಬುದರ ಬಗ್ಗೆ ತನಿಖೆ ಆರಂಭಿಸಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !