Tuesday, March 28, 2023

Latest Posts

BIG BREAKING NEWS | ರಾತ್ರೋರಾತ್ರಿ ಬಂಟ್ವಾಳದ ವಿವಿಧೆಡೆ NIA ದಿಢೀರ್ ದಾಳಿ

ಹೊಸದಿಗಂತ ಡಿಜಿಟಲ್ ಡೆಸ್ಕ್ :

ಪ್ರಧಾನಿ ನರೇಂದ್ರ ಮೋದಿಯವರ ಬಿಹಾರದ ಪಾಟ್ನಾ ದ ಕಾರ್ಯಕ್ರಮವನ್ನು ವಿಫಲಗೊಳಿಸಬೇಕು ಎಂಬ ನಿಟ್ಟಿನಲ್ಲಿ ಬಾಂಬ್ ಇಟ್ಟಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಹಣಕಾಸಿನ ನೆರವು ಒದಗಿಸಿದ ಬಂಟ್ವಾಳ ಮೂಲದ ನಾಲ್ವರು ಆರೋಪಿಗಳ ಮನೆಗೆ ಎನ್.ಐ.ಎ ತಂಡ ಭಾನುವಾರ ರಾತ್ರಿ ದಾಳಿ ನಡೆಸಿ ತನಿಖೆ ನಡೆಸುತ್ತಿದೆ.

ನಂದಾವರ ನಿವಾಸಿಗಳಾದ ಮಹಮ್ಮದ್ ಸಿನಾನ್, ಇಕ್ಬಾಲ್, ಸರ್ಪಾಜ್ ನವಾಜ್, ನೌಫಲ್ ಮನೆಗೆ ಹಾಗೂ ಆರೋಪಿಗಳಿಗೆ ಸೇರಿದೆಯೆನ್ನಲಾದ ಎರಡು ಸೈಬರ್ ಗಳಿಗೂ ದಾಳಿ ನಡೆದಿದೆ ಎಂದು ತಿಳಿದು ಬಂದಿದೆ.

ಈ ಅರೋಪಿಗಳು ಪಾಟ್ನಾ ದ ಪ್ರಧಾನಿ ಕಾರ್ಯಕ್ರಮಕ್ಕೆ ಸಂಬಂಧಿಸಿದಂತೆ ಭಯೋತ್ಪಾದಕ ರ ಜೊತೆ ಸಂಪರ್ಕ ಹೊಂದಿ ಹಣಕಾಸಿನ ನೆರವು ಒದಗಿಸಿದ್ದಾರೆ ಎಂಬ ಆರೋಪದಲ್ಲಿ ದಾಳಿ ನಡೆದಿದೆ ಎನ್ನಲಾಗುತ್ತಿದೆ.

ಈ ಕೃತ್ಯಕ್ಕೆ ಸಂಬಂಧಿಸಿದಂತೆ ಭಯೋತ್ಪಾದಕರ ವಿವಿಧ ಖಾತೆಗಳಿಗೆ ಕೋಟ್ಯಾಂತರ ರೂಪಾಯಿ ಹಣದ ವರ್ಗಾವಣೆ ಮಾಡಲಾಗಿದೆ ಎಂಬ ಆರೋಪ ಇವರ ಮೇಲಿದೆ ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ಎನ್.ಐ.ಎ ತಂಡ ದಾಳಿ ಮಾಡಿ ಪರಿಶೀಲನೆ ನಡೆಸುತ್ತಿದೆ ಎನ್ನಲಾಗಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!