ಹೊಸದಿಗಂತ ಡಿಜಿಟಲ್ ಡೆಸ್ಕ್:
ಭಾರತದದಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ ( Citizenship Amendment Act) ಕೇಂದ್ರ ಗೃಹ ಇಲಾಖೆ ಅಧಿಸೂಚನೆ ಹೊರಡಿಸಿದೆ.
ಈ ಮೂಲಕ ದೇಶಾದ್ಯಂತ ಸಿಎಎ ಪೌರತ್ವ ಕಾಯ್ದೆಯ ನಿಯಮಗಳ ಅಧಿಸೂಚನೆ ಹೊರಬಿದ್ದಿದೆ.
2019ರಲ್ಲಿ ಸಂಸತ್ತಿನಲ್ಲಿ ಸಿಎಎ ಕಾಯ್ದೆಗೆ ಅನುಮೋದನೆ ಸಿಕ್ಕರೂ, ಅಧಿಸೂಚನೆ ಹೊರಡಿಸಿರಲಿಲ್ಲ. ಇತ್ತೀಚೆಗೆ ಲೋಕಸಭಾ ಚುನಾವಣೆಗೆ ಮುನ್ನ ಸಿಎಎ ಜಾರಿಗೊಳಿಸುವುದಾಗಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಪುನರುಚ್ಚರಿಸಿದ್ದರು. ಇದರಂತೆ ಸಿಎಎ ನಿಮಯಗಳ ಅಧಿಸೂಚನೆ ಹೊರಡಿಸಲಾಗಿದೆ.
ಪ್ರಮುಖವಾಗಿ ಈ ಕಾಯ್ದೆಯಡಿ ಬಾಂಗ್ಲಾದೇಶ, ಪಾಕಿಸ್ತಾನ, ಆಫ್ಗಾನಿಸ್ತಾನದಿಂದ ಭಾರತಕ್ಕೆ 2014ರ ಡಿಸೆಂಬರ್ 31ಕ್ಕಿಂತ ಮೊದಲು ಆಗಮಿಸಿ ನೆಲೆಸಿದವರಿಗೆ ಭಾರತದ ಪೌರತ್ವ ನೀಡುವ ಕುರಿತಾಗಿದೆ. ಹಿಂದುಗಳು, ಸಿಖ್ಖರು, ಜೈನರು, ಬೌದ್ಧರು, ಪಾರ್ಸಿಗಳು ಹಾಗೂ ಕ್ರಿಶ್ಚಿಯನ್ನ ಈ ಮೂರು ದೇಶಗಳಲ್ಲಿ ನಡೆದ ನರಮೇಧ, ದೌರ್ಜನ್ಯಗಳಿಂದ ತಪ್ಪಿಸಿಕೊಂಡು ಭಾರತಕ್ಕೆ ಬಂದು ನೆಲೆಸಿದವರಿಗೆ ಪೌರತ್ವ ನೀಡುವ ಕುರಿತು ಕಾಯ್ದೆ ಹೇಳುತ್ತದೆ. ಈ ಕಾಯ್ದೆಯಲ್ಲಿ ಪ್ರಮುಖಾಗಿ ಉಲ್ಲೇಖಿಸಿರುವ ಅಂಶ, ಭಾರತಕ್ಕೆ ವಲಸೆ ಬಂದ ಮುಸ್ಲಿಮೇತರ ವಲಸಿಗರಿಗೆ ಭಾರತದ ಪೌರತ್ವ ನೀಡುವುದಾಗಿದೆ.
ಅಧಿಸೂಚನೆಯಿಂದ ಇದೀಗ ಭಾರತದಲ್ಲಿ ನೆಲೆಸಿರುವ ಪಾಕಿಸ್ತಾನ, ಆಫ್ಘಾನಿಸ್ತಾನ ಹಾಗೂ ಬಾಂಗ್ಲಾದೇಶದ ಮುಸ್ಲಿಮೇತರ ನಿರಾಶ್ರಿತರಿಗೆ ಭಾರತದ ಪೌರತ್ವ ಸಿಗಲಿದೆ. ಇದರಿಂದ ಕೇಂದ್ರ ಹಾಗೂ ಆಯಾ ರಾಜ್ಯದ ಸರ್ಕಾರಿ ಸೌಲಭ್ಯಗಳು ಲಭ್ಯವಾಗಲಿದೆ.