Friday, July 1, 2022

Latest Posts

BIG BREAKING NEWS | ದ್ವಿತೀಯ ಪಿಯುಸಿ ಪರೀಕ್ಷೆ ಮುಂದೂಡಿಕೆ, ಪ್ರಥಮ ಪಿಯು ವಿದ್ಯಾರ್ಥಿಗಳು ಪಾಸ್,ಉಪನ್ಯಾಸಕರಿಗೆ ವರ್ಕ್ ಫ್ರಂ ಹೋಂ: ಸಚಿವ ಸುರೇಶ್ ಕುಮಾರ್ ಘೋಷಣೆ

 ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………………………………………….

ಹೊಸದಿಗಂತ ಆನ್ ಲೈನ್ ಡೆಸ್ಕ್:

ಕೊರೋನಾ ಸೋಂಕಿನ ಪ್ರಮಾಣ ಹೆಚ್ಚುತ್ತಿರುವ ಹಿನ್ನೆ ಮೇ 24ರಿಂದ ಆರಂಭವಾಗಬೇಕಿದ್ದ ದ್ವಿತೀಯ ಪಿಯುಸಿ ಪರೀಕ್ಷೆಗಳನ್ನು ಮುಂದೂಡಲಾಗಿದೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ತಿಳಿಸಿದ್ದಾರೆ.
ಮಂಗಳವಾರ ವಿಧಾನಸೌಧದಲ್ಲಿ ಇಲಾಖೆಯ ಅಧಿಕಾರಿಗಳೊಂದಿಗೆ ಚರ್ಚಿಸಿದ ನಂತರ ಮಾತನಾಡಿದ ಅವರು, ಮುಂದಿನ ದಿನಗಳಲ್ಲಿ ಪರೀಕ್ಷೆಗಳ ದಿನಾಂಕಗಳನ್ನು ಪ್ರಕಟಿಸಲಾಗುವುದು. ಪರೀಕ್ಷಾ ದಿನಾಂಕಗಳನ್ನು ಪರೀಕ್ಷೆಗಳು ಆರಂಭವಾಗುವುದಕ್ಕೆ 15-20 ದಿನಗಳ ಮುನ್ನವೇ ಪ್ರಕಟಿಸಲಾಗುವುದು ಎಂದರು.
ಪರೀಕ್ಷೆ ಮುಂದೂಡಿರುವುದರಿಂದ ವಿದ್ಯಾರ್ಥಿಗಳುಯಾವುದೇ ಕಾರಣಕ್ಕೂ ವಿಚಲಿತರಾಗದೇ ಶ್ರದ್ಧೆಯಿಂದ ತಮ್ಮ ವಿದ್ಯಾಭ್ಯಾಸವನ್ನು ಎಂದಿನಂತೆ ಮುಂದುವರೆಸಬೇಕೆಂದು ಅವರು ಮನವಿ ಮಾಡಿದ್ದಾರೆ.
ಮೊದಲನೆ ಪಿಯು ವಿದ್ಯಾರ್ಥಿಗಳಿಗೆ ಪ್ರಮೋಷನ್:
ದ್ವಿತೀಯ ಪಿಯು ಪರೀಕ್ಷೆಗಳ ನಂತರ ನಡೆಸಬೇಕೆಂದು ನಿರ್ಧರಿಸಲಾಗಿದ್ದ, ಪ್ರಥಮ ಪಿಯು ಪರೀಕ್ಷೆಗಳನ್ನು ಕೋವಿಡ್ ಹಿನ್ನೆಲೆಯಲ್ಲಿ ರದ್ದುಪಡಿಸಲಾಗಿದ್ದು, ಪ್ರಥಮ ವರ್ಷದ ಪಿಯು ವಿದ್ಯಾರ್ಥಿಗಳನ್ನು ಮುಂದಿನ ತರಗತಿಗೆ ತೇರ್ಗಡೆ ಮಾಡುವ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ ಎಂದು ಸುರೇಶ್ ಕುಮಾರ್ ತಿಳಿಸಿದ್ದಾರೆ.
ಈ ವಿದ್ಯಾರ್ಥಿಗಳಿಗೆ ಮುಂದಿನ ಶೈಕ್ಷಣಿಕ ವರ್ಷದ ಪ್ರಾರಂಭದ ಮುನ್ನ ಬ್ರಿಡ್ಜ್ ಕೋರ್ಸ್ಗಳನ್ನು ನಡೆಸಲಾಗುತ್ತದೆ. ಹಾಗೆಯೇ ಇಲಾಖೆಯ ಯೂ-ಟ್ಯೂಬ್ ಚಾನಲ್ಗಳ ಮೂಲಕ ಈಗಿನಿಂದಲೇ ಈ ಬ್ರಿಡ್ಜ್ ಕೋರ್ಸ್ಗಳು ಲಭ್ಯವಾಗುವಂತೆ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಅವರು ತಿಳಿಸಿದರು.
ಉಪನ್ಯಾಸಕರಿಗೆ ವರ್ಕ್ ಫ್ರಂ ಹೋಂ:
ಪರೀಕ್ಷೆಗಳನ್ನು ಮುಂದೂಡಿರುವ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳೊಂದಿಗೆ ಸತತವಾಗಿ ಸಂಪರ್ಕದಲ್ಲಿರುವಂತೆ ಉಪನ್ಯಾಸಕರು ವರ್ಕ್ ಫ್ರಂ ಹೋಂ ಕೆಲಸ ಮಾಡಲು ಸೂಚಿಸಲಾಗಿದೆ.
ವಿದ್ಯಾರ್ಥಿಗಳೊಂದಿಗೆ ನಿರಂತರ ಸಂಪರ್ಕ, ಇಲಾಖೆಯ ಪಠ್ಯ ಬೋಧನಾ ಕ್ರಮಗಳನ್ನು ಅವರೊಂದಿಗೆ ಚರ್ಚಿಸುವುದು ಸೇರಿದಂತೆ ಎಲ್ಲ ಆಡಳಿತಾತ್ಮಕ ಕ್ರಮಗಳಲಿಗೆ ಅವರು ಸದಾ ಲಭ್ಯವಾಗಬೇಕಿದೆ. ಹಾಗೆಯೇ ಕೋವಿಡ್ ಕರ್ತವ್ಯಗಳಲ್ಲಿ ತೊಡಗಿಸಿಕೊಂಡಿರುವ ಉಪನ್ಯಾಸಕರು ತಮ್ಮ ಕೋವಿಡ್ ಜವಾಬ್ದಾರಿಗಳನ್ನು ಪೂರೈಸಬೇಕಿದೆ ಎಂದು ಸುರೇಶ್ ಕುಮಾರ್ ತಿಳಿಸಿದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss